ಕರ್ನಾಟಕ

karnataka

ETV Bharat / state

SC, ST ವರ್ಗದ ಜನರ ಮೇಲಾಗುವ ದೌರ್ಜನ್ಯ ತಡೆಗೆ ಕ್ರಮ ಕೈಗೊಳ್ಳಲಾಗಿದೆ: ಡಿಸಿ ಡಾ. ಬಗಾದಿ ಗೌತಮ್ - Chickmagaluru latest news

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೇಲಾಗುವ ದೌರ್ಜನ್ಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ತಿಳಿಸಿದರು.

Meeting
Meeting

By

Published : Jun 30, 2020, 7:05 PM IST

ಚಿಕ್ಕಮಗಳೂರು:ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೇಲಾಗುವ ದೌರ್ಜನ್ಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ತಿಳಿಸಿದರು.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೇಲಾಗುವ ದೌರ್ಜನ್ಯ ನಿಯಂತ್ರಣ ಜಿಲ್ಲಾ ಜಾಗೃತ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮೂಡಿಗೆರೆ, ಕೊಪ್ಪ, ನರಸಿಂಹರಾಜಪುರ, ಶೃಂಗೇರಿ ಭಾಗಗಳಲ್ಲಿ ಸಾಕಷ್ಟು ವರ್ಷಗಳಿಂದ ಕಂದಾಯ ಭೂಮಿಗಳ ಸಮಸ್ಯೆಯಾಗಿದೆ. ಇದರ ನಡುವೆಯೂ ಜಾಗಗಳನ್ನು ನೀಡಲಾಗಿದೆ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಫಲಾನುಭವಿಗಳಿಗೆ ಹಕ್ಕು ಪತ್ರ ಹಾಗೂ ಹಣವನ್ನು ನೀಡಿದ್ದು, ಮನೆಗಳನ್ನು ನಿರ್ಮಿಸಿಕೊಂಡಿಲ್ಲ ಎಂದು ತಿಳಿಸಿದರು.

ಮೂಡಿಗೆರೆ ತಾಲೂಕಿನ ವ್ಯಾಪ್ತಿಯಲ್ಲಿರುವ ನಿವೇಶನ ರಹಿತರಿಗೆ, ನಿವೇಶನ ಒದಗಿಸಲು ಬಸ್ಕಲ್ ಗ್ರಾಮದಲ್ಲಿ ಸರ್ಕಾರಿ ಜಾಗವನ್ನು ಗುರುತಿಸಲಾಗಿದೆ. ಸ್ವತಃ ನಾನೇ ಅಲ್ಲಿಗೆ ಹೋಗಿ ಪರಿಶೀಲಿಸಿದ್ದೇನೆ. ಈ ಬಸ್ಕಲ್ ಗ್ರಾಮವು ಚಿಕ್ಕಮಗಳೂರು ತಾಲೂಕಿನ ವ್ಯಾಪ್ತಿಗೆ ಒಳಪಡುತ್ತದೆ ಹಾಗಾಗಿ ಈ ಬಗ್ಗೆ ಚಿಕ್ಕಮಗಳೂರು ತಹಶೀಲ್ದಾರ್ ಕ್ರಮ ವಹಿಸಬೇಕು.

ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಪಾತ್ರೆ ಸಾಮಾನುಗಳಿಲ್ಲದೆ ದಲಿತ ಕುಟುಂಬಗಳ ಮದುವೆಗಳಿಗೆ ಸಾಕಷ್ಟು ತೊಂದರೆಗಳು ಉಂಟಾಗುತ್ತಿದ್ದು, ನಗರ ಸಭೆಯು ಮುಂದಿನ ಕ್ರಿಯಾ ಯೋಜನೆ ವರದಿಯಲ್ಲಿ ಈ ಸಮುದಾಯ ಭವನಕ್ಕೆ ಅಗತ್ಯವಿರುವ ವಸ್ತುಗಳನ್ನು ಕೊಡಿಸಲಾಗುವುದು.

ಕಡೂರು ತಾಲೂಕಿನ ಎಮ್ಮೆದೊಡ್ಡಿ ಗ್ರಾಮ ಪಂಚಾಯಿತಿಯ ಅರಳಘಟ್ಟ ಗಾಂಧೀನಗರದ 10 ಮನೆಗಳಿಗೆ ವಿದ್ಯುತ್ ಸಂಪರ್ಕವಿಲ್ಲದೆ ಇರುವುದರಿಂದ 64 ಸಿ ಅಡಿಯಲ್ಲಿ ಅರ್ಜಿಯನ್ನು ಸಲ್ಲಿಸಿ, ನಂತರ ಕ್ರಮ ಕೈಗೊಳ್ಳಲಾಗುವುದು. ಹಾಗೂ ಈ ಬಗ್ಗೆ ಕಡೂರು ತಹಶೀಲ್ದಾರ್ ಸೂಕ್ತ ಕ್ರಮವಹಸಿ ಶಿಥಿಲಗೊಂಡ ಮನೆಗಳ ಫಲಾನುಭವಿಗಳಿಗೆ ಮನೆಗಳನ್ನು ನಿರ್ಮಿಸಲು ಅವಕಾಶ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ABOUT THE AUTHOR

...view details