ಚಿಕ್ಕಮಗಳೂರು:ಚಿಕ್ಕಮಗಳೂರಿನಲ್ಲಿ ಮೆಸ್ಕಾಂನ ಸಹಾಯಕ ಇಂಜಿನೀಯರ್ ಮೇಲೆ ಎಸಿಬಿ ದಾಳಿ ನಡೆದಿದೆ. ಎಂಟು ಸಾವಿರ ಲಂಚದ ಹಣ ಸ್ವೀಕರಿಸುವ ವೇಳೆಯಲ್ಲಿ ನೇರವಾಗಿ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ.
ರೆಡ್ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಮೆಸ್ಕಾಂ ಅಧಿಕಾರಿ - undefined
ಚಿಕ್ಕಮಗಳೂರಿನಲ್ಲಿ ಮೆಸ್ಕಾಂ ಅಧಿಕಾರಿಯೊಬ್ಬರು ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದಿದ್ದು, ಅಧಿಕಾರಿಯನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.
ಚಿಕ್ಕಮಗಳೂರು ನಗರದ ಆಜಾದ್ ಪಾರ್ಕ್ ವೃತ್ತದಲ್ಲಿರುವ ಮೆಸ್ಕಾಂ ಕಚೇರಿಯಲ್ಲಿ ಈ ದಾಳಿ ನಡೆದಿದ್ದು, ಜಯನಗರ ಬಡಾವಣೆಯಲ್ಲಿ ಹೊಸ ಮನೆಗೆ ವಿದ್ಯುತ್ ಸಂಪರ್ಕ ನೀಡಲು ಮೆಸ್ಕಾಂ ನ ಸಹಾಯಕ ಇಂಜಿನೀಯರ್ ರಾಘವೇಂದ್ರ ಅವರು ವ್ಯಕ್ತಿಯ ಬಳಿ ಎಂಟು ಸಾವಿರ ಹಣಕ್ಕೆ ಬೇಡಿಕೆ ಇಟ್ಚಿದ್ದರು. ಆ ಹಣವನ್ನು ಕಚೇರಿಯಲ್ಲಿ ಪಡೆದುಕೊಳ್ಳುವ ವೇಳೆ ಈ ದಾಳಿ ಮಾಡಲಾಗಿದ್ದು, ಆರೋಪಿ ಸಹಾಯಕ ಹಾಗೂ ಇಂಜಿನೀಯರ್ ರಾಘವೇಂದ್ರ ಅವರು ಎಸಿಬಿ ಅಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ. ನಂತರ ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಿ ನಂತರ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.