ಕರ್ನಾಟಕ

karnataka

ETV Bharat / state

ಚಿಕ್ಕಬಳ್ಳಾಪುರದಲ್ಲಿ ಮತ್ತೆ ಕಂಪಿಸಿದ ಭೂಮಿ.. - ಶೆಟ್ಟಿಗೆರೆ ಗ್ರಾಮದಲ್ಲಿ ಮತ್ತೆ ಕಂಪಿಸಿದ ಭೂಮಿ

ಚಿಕ್ಕಬಳ್ಳಾಪುರದಲ್ಲಿ ಮತ್ತೆ ಭೂಮಿ ಕಂಪಿಸಿದೆ. ಶೆಟ್ಟಿಗೆರೆ ಗ್ರಾಮದಲ್ಲಿ ಇಂದು ಬೆಳಗ್ಗೆ ಭೂಮಿ ನಡುಗಿದೆ.

ಚಿಕ್ಕಬಳ್ಳಾಪುರದಲ್ಲಿ ಮತ್ತೆ ಕಂಪಿಸಿದ ಭೂಮಿ
ಚಿಕ್ಕಬಳ್ಳಾಪುರದಲ್ಲಿ ಮತ್ತೆ ಕಂಪಿಸಿದ ಭೂಮಿ

By

Published : Jan 22, 2022, 10:16 AM IST

ಚಿಕ್ಕಬಳ್ಳಾಪುರ:ತಾಲೂಕಿನ ಶೆಟ್ಟಿಗೆರೆ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮತ್ತೆ ಭೂಮಿ ಕಂಪಿಸಿದೆ. ಪರಿಣಾಮ ಗ್ರಾಮಸ್ಥರು ಮನೆಗಳನ್ನು ತೊರೆದು ಬಯಲು ಪ್ರದೇಶದಲ್ಲಿ ಕಾಲ ಕಳೆಯುವಂತಾಗಿದೆ.

ಇಂದು ಬೆಳಿಗ್ಗೆ ಭಾರಿ ಸದ್ದಿನೊಂದಿಗೆ ಹಲವು ಬಾರಿ ಭೂಮಿ ಕಂಪಿಸಿದ್ದು, ಜನ ಭಯಭೀತರಾಗಿದ್ದಾರೆ. ಸದ್ಯ ಇದೇ ಪ್ರದೇಶದಲ್ಲಿ ಕಳೆದ ಡಿಸೆಂಬರ್ ಹಾಗೂ ಜನವರಿ ಮೊದಲ ವಾರದಲ್ಲಿ ನಾಲ್ಕು ಬಾರಿ ಭೂಮಿ ಕಂಪಿಸಿತ್ತು. ಪದೇ ಪದೇ ಭೂಮಿ ಕಂಪಿಸುತ್ತಿರೋದಕ್ಕೆ ಆತಂಕಗೊಂಡ ಜನ ಮನೆಗಳನ್ನು ತೊರೆದು ದೂರದ ಸ್ಥಳಗಳಿಗೆ ತೆರಳುತ್ತಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಮತ್ತೆ ಕಂಪಿಸಿದ ಭೂಮಿ

ಇನ್ನೂ‌ ಈಗಾಗಲೇ ಹಲವು ಬಾರಿ ಭೂವಿಜ್ಞಾನಿಗಳ ತಂಡ ಹಾಗೂ ಸಚಿವ ಸುಧಾಕರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳೆದ ತಿಂಗಳ ಹಿಂದೆ ಅಧಿಕ ಮಳೆಯಿಂದ ಭೂಮಿಯಲ್ಲಿ ಸೃಷ್ಟಿಯಾಗಿರುವ ಶಬ್ದದಿಂದ ಭೂಮಿ ಕಂಪಿಸುತ್ತಿದೆ ಎಂದು ಹೇಳಲಾಗುತ್ತಿದೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ABOUT THE AUTHOR

...view details