ಚಿಕ್ಕಮಗಳೂರು: ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸುವವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಸಾರ್ವಜನಿಕ ಚರ್ಚೆಗೆ ಆಹ್ವಾನ ನೀಡಿದ್ದಾರೆ.
ಎಪಿಎಂಸಿ ಕಾಯ್ದೆ ಇನ್ನಷ್ಟು ರೈತ ಸ್ನೇಹಿ ಮಾಡಿದ್ದೇವೆ: ಸಚಿವ ಸಿ.ಟಿ.ರವಿ ಸ್ಪಷ್ಟನೆ - ಎಪಿಎಂಸಿ ಕಾಯ್ದೆ
ಈ ಕಾಯ್ದೆಯಿಂದ ರೈತರಿಗೆ ಏನು ತೊಂದರೆ ಆಗುತ್ತೆ ಹೇಳಿ? ಹೆಚ್ಚು ಜನ ಖರೀದಿದಾರರು ಹುಟ್ಟಿಕೊಂಡರೆ ರೈತರಿಗೆ ಲಾಭ ಹೆಚ್ಚೇ ವಿನಃ ನಷ್ಟವಲ್ಲ. ಯಾರೂ ಹೆಚ್ಚು ಬೆಲೆ ಕೊಡುತ್ತಾರೋ, ಎಲ್ಲಿ ಹೆಚ್ಚು ಲಾಭ ಸಿಗುತ್ತೋ ರೈತರು ಅಲ್ಲಿ ಹೋಗಿ ಮಾರಾಟ ಮಾಡಬಹುದು. ಸ್ಪರ್ಧೆ ಬೆಳೆಯುತ್ತೆ, ಅವಕಾಶ ಹೆಚ್ಚಾದಾಗ ರೈತರು ಮುಕ್ತವಾಗಿ ಮಾರಾಟ ಮಾಡಲು ಅವಕಾಶ ಸಿಗುತ್ತದೆ ಎಂದು ಸಚಿವ ಸಿ.ಟಿ. ರವಿ ಹೇಳಿದ್ದಾರೆ.
ವಿರೋಧಕ್ಕಾಗಿ ವಿರೋಧ ಮಾಡೋದು ಅರ್ಥಹೀನವಾಗಿದ್ದು. 2003ರಲ್ಲಿ ಈ ಕಾಯ್ದೆಯ ಡ್ರಾಫ್ಟ್ ಆಗಿದೆ. ಯುಪಿಎ ಸರ್ಕಾರದ ಅವಧಿಯಲ್ಲಿ ಆ ಡ್ರಾಫ್ಟ್ ಪರಿಷ್ಕರಣೆ ಮಾಡಿ ಮಾಡೆಲ್ ಡ್ರಾಫ್ಟ್ ಆದ ಬಳಿಕ 16 ರಾಜ್ಯಗಳು ಅದನ್ನು ಒಪ್ಪಿಕೊಂಡವು. ಈಗ ಅದನ್ನು ಇನ್ನಷ್ಟು ಸುಧಾರಣೆ ಮಾಡಿ ರೈತಸ್ನೇಹಿಯಾಗಿ ಹೊಸ ಕಾಯ್ದೆಯನ್ನು ಜಾರಿಗೆ ತಂದಿದೆ. ಅದನ್ನ ವಿರೋಧ ಮಾಡುವವರಿಗೆ ನಾನು ಸಾರ್ವಜನಿಕ ಚರ್ಚೆಗೆ ಆಹ್ವಾನ ನೀಡುತ್ತಿದ್ದೇನೆ ಎಂದು ಹೇಳಿದರು.
ಈ ಕಾಯ್ದೆಯಿಂದ ರೈತರಿಗೆ ಏನು ತೊಂದರೆ ಆಗುತ್ತೆ ಹೇಳಿ? ಹೆಚ್ಚು ಜನ ಖರೀದಿದಾರರು ಹುಟ್ಟಿಕೊಂಡರೆ ರೈತರಿಗೆ ಲಾಭ ಹೆಚ್ಚೋ ವಿನಃ ನಷ್ಟವಲ್ಲ. ಯಾರು ಹೆಚ್ಚು ಬೆಲೆ ಕೊಡುತ್ತಾರೋ ಎಲ್ಲಿ ಹೆಚ್ಚು ಲಾಭ ಸಿಗುತ್ತೆ ರೈತರು ಅಲ್ಲಿ ಹೋಗಿ ಮಾರಾಟ ಮಾಡಬಹುದು. ಸ್ಪರ್ಧೆ ಬೆಳೆಯುತ್ತೆ, ಅವಕಾಶ ಹೆಚ್ಚಾದಾಗ ರೈತರು ಮುಕ್ತವಾಗಿ ಮಾರಾಟ ಮಾಡಲು ಅವಕಾಶ ಸಿಗುತ್ತದೆ. ರೈತರ ಬೆಳೆಗೆ ಲಾಭ ಸಿಗುತ್ತದೆಯೋ ಅಲ್ಲಿಗೆ ರೈತರು ಮಾರುತ್ತಾರೆ ಎಂದೂ ಚಿಕ್ಕಮಗಳೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಅವರು ಹೇಳಿದ್ದಾರೆ.