ಚಿಕ್ಕಮಗಳೂರು:ಬೆಂಗಳೂರಿನಲ್ಲಿ ರಾತ್ರಿ ನಡೆದಿರುವ ಡಿ.ಜೆ ಹಳ್ಳಿ ಗಲಭೆ ಪ್ರಕರಣವನ್ನು ನಾನು ಖಂಡಿಸುತ್ತೇನೆ ಎಂದು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಟ್ವೀಟ್ ಮಾಡಿದ್ದಾರೆ.
ಡಿ.ಜೆ ಹಳ್ಳಿ ಗಲಭೆ ಪ್ರಕರಣ ಖಂಡಿಸಿದ ಸಚಿವ ಸಿ.ಟಿ.ರವಿ
ನಿನ್ನೆ ಡಿ.ಜೆ ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣವನ್ನು ಖಂಡಿಸಿ ಸಚಿವ ಸಿ.ಟಿ.ರವಿ ಟ್ವೀಟ್ ಮಾಡಿದ್ದಾರೆ.
CT Ravi
ಪತ್ರಕರ್ತರು, ಪೊಲೀಸರು, ಅಮಾಯಕ ಸಾರ್ವಜನಿಕರ ಮೇಲೆ ಹಲ್ಲೆ ಮಾಡಿರುವುದು ಪೂರ್ವಯೋಜಿತ ಎಂಬಂತೆ ಕಾಣಿಸುತ್ತಿದೆ. ಕಲ್ಲು, ದೊಣ್ಣೆ, ಪೆಟ್ರೋಲ್ ಬಾಂಬ್ ಗಲಭೆಕೋರರಿಗೆ ಬಂದಿದ್ದೆಲ್ಲಿಂದ? ಗಲಭೆ ಪೂರ್ವಯೋಜಿತ, ಗಲಭೆ ನಡೆಸುವವರಿಗೆ ಒಂದು ನೆಪ ಬೇಕಿತ್ತು. ಇವರನ್ನು ಬೇರು ಸಹಿತ ಮಟ್ಟ ಹಾಕಲೇಬೇಕು ಎಂದು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಟ್ವೀಟ್ ಮಾಡಿದ್ದಾರೆ.