ಚಿಕ್ಕಮಗಳೂರು: ನಾವು ಆ ರೀತಿ ಏಕ ವಚನದಲ್ಲಿ ಮಾತನಾಡುವುದಿಲ್ಲ, ನಮಗೆ ಅದು ಶೋಭೆ ತರಲ್ಲ ಎಂದು ಮಾಜಿ ಸಿಎಂ ಹೆಚ್. ಡಿ.ಕುಮಾರಸ್ವಾಮಿಗೆ ಸಚಿವ ನಾರಾಯಣ ಗೌಡ ಟಾಂಗ್ ನೀಡಿದ್ದಾರೆ.
ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ, ವಸತಿ ನಿಲಯ ಪರಿಶೀಲನೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಲು ಜಿಲ್ಲೆಗೆ ಆಗಮಿಸಿದ್ದ ವೇಳೆ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಹೇಳಿಕೆ ಕುರಿತು ಸಚಿವ ನಾರಾಯಣಗೌಡ ಪ್ರತಿಕ್ರಿಯಿಸಿದರು. (KRS ರಕ್ಷಣೆಗೆ ಅವ್ರನ್ನೇ ಮಲಗಿಸಬೇಕೆಂದ ಹೆಚ್ಡಿಕೆ..ಭಾಷೆ ಮೇಲೆ ಹಿಡಿತ ಇಲ್ವಾ ಎಂದು ಕುಟುಕಿದ ಸಂಸದೆ ಸುಮಲತಾ)