ಕರ್ನಾಟಕ

karnataka

ETV Bharat / state

ಶ್ರೀ ಜಗದ್ಗುರು ಭಾರತೀ ತೀರ್ಥ ಸ್ವಾಮೀಜಿ ಆಶೀರ್ವಾದ ಪಡೆದ ಸಚಿವ ಸುಧಾಕರ್ - ಸಚಿವ ಕೆ.ಸುಧಾಕರ್

ಆರೋಗ್ಯ ಸಚಿವ ಕೆ.ಸುಧಾಕರ್ ಇಂದು ಚಿಕ್ಕಮಗಳೂರು ಪ್ರವಾಸ ಕೈಗೊಂಡು ಹಲವು ಅಭಿವೃದ್ಧಿ ಕಾರ್ಯಗಳ ಪರಿಶೀಲನೆ ನಡೆಸಿದರು. ಈ ವೇಳೆ ಶೃಂಗೇರಿಯ ಶಾರದಾಂಬೆ ದೇವಾಲಯಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು.

minister Sudhakar who has received the Blessing from Shri Jagadguru Tirtha Swamiji
ಶ್ರೀ ಜಗದ್ಗುರು ಭಾರತೀ ತೀರ್ಥ ಸ್ವಾಮೀಜಿ ಆರ್ಶೀವಾದ ಪಡೆದ ಸಚಿವ ಸುಧಾಕರ್

By

Published : Nov 7, 2020, 7:56 PM IST

ಚಿಕ್ಕಮಗಳೂರು: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್​​​ ಜಿಲ್ಲೆಯಲ್ಲಿ ಪ್ರವಾಸ ಮಾಡಿದ್ದು, ನಗರದ ಪ್ರವಾಸಿ ಮಂದಿರದಲ್ಲಿ ಕೋವಿಡ್-19 ಕುರಿತು ಹಾಗೂ ಜಿಲ್ಲೆಯಲ್ಲಿ ನಿರ್ಮಾಣವಾಗುತ್ತಿರುವ ಮೆಡಿಕಲ್ ಕಾಲೇಜು ಸ್ಥಾಪನೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು.

ಶ್ರೀ ಜಗದ್ಗುರು ಭಾರತೀ ತೀರ್ಥ ಸ್ವಾಮೀಜಿ ಆಶೀರ್ವಾದ ಪಡೆದ ಸಚಿವ ಸುಧಾಕರ್

ನಂತರ ವೈದ್ಯಕೀಯ ಕಾಲೇಜು ಸ್ಥಾಪನೆಯ ವಿಚಾರ ಸಂಬಂಧ ನಗರದ ಹೊರವಲಯದ ಕದ್ರಿ ಮಿದ್ರಿ ಬಳಿ ಮೆಡಿಕಲ್ ಕಾಲೇಜು ನಿರ್ಮಾಣದ ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳ ಜೊತೆ ಪರಿಶೀಲನೆ ನಡೆಸಿದರು. ನಂತರ ಶೃಂಗೇರಿಗೆ ಭೇಟಿ ನೀಡಿ ಶೃಂಗೇರಿಯಲ್ಲಿರುವ ತಾಲೂಕು ಆಸ್ಪತ್ರೆ ಪರಿಶೀಲನೆ ನಡೆಸಿದರು.

ಈ ಎಲ್ಲಾ ಕಾರ್ಯಕ್ರಮಗಳು ಮುಗಿದ ನಂತರ ಶೃಂಗೇರಿ ಶಾರದಾಂಬೆ ದೇವಸ್ಥಾನಕ್ಕೆ ಭೇಟಿ ನೀಡಿದ ಸಚಿವ ಕೆ.ಸುಧಾಕರ್, ಶಾರದಾಂಬೆಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. ನಂತರ ನರಸಿಂಹ ವನದ ಪಕ್ಕದಲ್ಲಿರುವ ಶ್ರೀ ಜಗದ್ಗುರು ಭಾರತೀ ತೀರ್ಥ ಸ್ವಾಮೀಜಿ ನಿವಾಸಕ್ಕೆ ತೆರಳಿ ಗುರುಗಳ ಭೇಟಿ ಮಾಡಿ ಆಶೀರ್ವಾದ ಪಡೆದರು.

ABOUT THE AUTHOR

...view details