ಚಿಕ್ಕಮಗಳೂರು:ಜಿಲ್ಲೆಯ ಮಲೆನಾಡು ಭಾಗದಲ್ಲಿ ಅಕ್ರಮ ಮರಳು ದಂಧೆ ನಡೆಸುತ್ತಿದ್ದ ಆರೋಪಿಗಳನ್ನು ಬಂಧಿಸಲು ಪೊಲೀಸರು ತೆರಳಿದ್ದ ವೇಳೆ ಮರಳು ದಂಧೆಕೋರರು ಪೊಲೀಸರ ಮೇಲೆ ಲಾರಿ ಹತ್ತಿಸಲು ಯತ್ನಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ತಲಗೂರು ಗ್ರಾಮದಲ್ಲಿ ನಡೆದಿದೆ.
ಮರಳು ದಂಧೆಕೋರರು ಪೊಲೀಸರ ಮೇಲೆ ನಡೆಸಿದ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮೂವರು ಪೊಲೀಸರು ಪಾರಾಗಿದ್ದಾರೆ. ಆರೋಪಿ ಮೊಹಿನುದ್ದೀನ್ನನ್ನು ಬಂಧಿಸಲು ಪೊಲೀಸರು ಸ್ಥಳಕ್ಕೆ ಹೋದಾಗ ಈ ಘಟನೆ ನಡೆದಿದೆ.