ಚಿಕ್ಕಮಗಳೂರು :ಚಿಕ್ಕಮಗಳೂರು ಶಾಸಕ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರ ತಂದೆ ಸಿ.ಇ. ತಿಮ್ಮೇಗೌಡ(92) ಅವರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ನಾಳೆ ಬೆಳಗ್ಗೆ 11.30 ಕ್ಕೆ ತಾಲೂಕಿನ ಆಲ್ದೂರಿನ ಚಿಕ್ಕಮಾಗರವಳ್ಳಿಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ. ಭಾನುವಾರ ಬೆಳಗ್ಗೆ 6 ಗಂಟೆಯಿಂದ ಬೆಳಗ್ಗೆ 11.30 ರವರೆಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಆಲ್ದೂರಿನಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.