ಚಿಕ್ಕಮಗಳೂರು:ಕೊರೊನಾ ವೈರಸ್ ಭೀತಿ ಹಿನ್ನೆಲೆ ಕ್ಷೇತ್ರದಲ್ಲಿ ಶಾಸಕ ಟಿ ರಾಜೇಗೌಡ ಸುತ್ತುಹಾಕಿ ವೀಕ್ಷಣೆ ಮಾಡಿದರು. ಈ ವೇಳೆ ಕ್ಷೇತ್ರದಲ್ಲಿನ ಪರಿಸ್ಥಿತಿ ಅವಲೋಕಿಸುವ ಕೆಲಸ ಮಾಡಿದರು.
ಕ್ಷೇತ್ರದಲ್ಲಿ ಪರಿಸ್ಥಿತಿ ಅವಲೋಕಿಸಿದ ಶೃಂಗೇರಿ ಶಾಸಕ - ಚಿಕ್ಕಮಗಳೂರು ಸುದ್ದಿ
ಕೊರೊನಾ ವೈರಸ್ ಭೀತಿ ಹಿನ್ನೆಲೆ, ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ ಅವರು ಕ್ಷೇತ್ರದಲ್ಲಿ ಸಂಚಾರ ಮಾಡುವುದರ ಮೂಲಕ ಲಾಕ್‌ಡೌನ್ ಪರಿಸ್ಥಿತಿ ವೀಕ್ಷಣೆ ಮಾಡಿದರು.
ಕ್ಷೇತ್ರದ ಅಭಿವೃದ್ಧಿ ಜೊತೆಗೆ ಜನರ ಆರೋಗ್ಯವೂ ಬಹುಮುಖ್ಯವಾಗಿದ್ದು, ಪ್ರತಿಯೊಬ್ಬರೂ ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಹಾಗೂ ಸರ್ಕಾರದ ಮತ್ತು ಪೊಲೀಸರ ಸೂಚನೆಯಂತೆ ಸಮಾಧಾನದಿಂದ ನಡೆದುಕೊಳ್ಳುವಂತೆ ಜನರಿಗೆ ಕಳಕಳಿಯ ಮನವಿ ಮಾಡಿದ್ದಾರೆ. ನನ್ನ ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಿಂದ ಅಭಿವೃದ್ಧಿ ಕಾಮಗಾರಿಯನ್ನು ತಾತ್ಕಾಲಿಕವಾಗಿ ತಡೆಯಲಾಗಿದ್ದು, ಅ ಅನುದಾನದಿಂದ ನನ್ನ ಮತ ಕ್ಷೇತ್ರದ ಜನರಿಗೆ ಮಾಸ್ಕ್, ಸ್ಯಾನಿಟೈಸರ್ ಮತ್ತಿತರ ಔಷಧಗಳಿಗೆ ಬಳಕೆ ಮಾಡಿಕೊಳ್ಳಲು ಮಾನ್ಯ ಜಿಲ್ಲಾಧಿಕಾರಿಗಳಿಗೆ ಸಂಪೂರ್ಣ ಹಕ್ಕು ನೀಡಿದ್ದೇನೆ ಎಂದು ಹೇಳಿದ್ದಾರೆ.
ಬಾಳೆಹೊನ್ನೂರಿನಲ್ಲಿ ಲಾಕ್‌ಡೌನ್ ಹೇಗಿದೆ ಎಂದೂ ಅವರು ಪರಿಶೀಲನೆ ಮಾಡಿದ್ರು. ಪೊಲೀಸರು ಹೇಗೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಹಾಗೂ ಆಸ್ಪತ್ರೆಗಳಲ್ಲಿ ವೈದ್ಯಕೀಯ ಚಿಕಿತ್ಸೆ ಹೇಗೆ ನಡೆಯುತ್ತಿದೆ ಎಂದು ವೈದ್ಯರು ಹಾಗೂ ಅಧಿಕಾರಿಗಳ ಜತೆ ಚರ್ಚೆ ಮಾಡಿದರು.