ಚಿಕ್ಕಮಗಳೂರು:ಇಂದು ಬೆಳಗ್ಗೆ ನೂರಾರು ಬೆಂಬಲಿಗರೊಂದಿಗೆಹುಲ್ಲೆಮನೆ ಗ್ರಾಮಕ್ಕೆ ಶಾಸಕ ಎಂ.ಪಿ ಕುಮಾರಸ್ವಾಮಿ ಮತ್ತೆ ಭೇಟಿ ನೀಡಿದ್ದಾರೆ. ಮೂಡಿಗೆರೆ ತಾಲೂಕಿನ ಹುಲ್ಲೆಮನೆ ಗ್ರಾಮದಲ್ಲಿ ಕಾಡಾನೆ ತುಳಿತಕ್ಕೆ ಬಲಿಯಾದ ಮಹಿಳೆಯ ಅಂತ್ಯ ಸಂಸ್ಕಾರದಲ್ಲಿ ಅವರು ಭಾಗಿಯಾಗಿದ್ದಾರೆ.
ಇದನ್ನೂ ಓದಿ:ಚಿಕ್ಕಮಗಳೂರಲ್ಲಿ ಆನೆ ದಾಳಿಗೆ ಮಹಿಳೆ ಬಲಿ: ಗ್ರಾಮಸ್ಥರ ಆಕ್ರೋಶ
ಭಾನುವಾರ ಸಂಜೆ ಗ್ರಾಮಕ್ಕೆ ಭೇಟಿ ನೀಡಿದ್ದ ವೇಳೆ ಶಾಸಕರ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದರು. ಮಾತಿಗೆ ಮಾತು ಬೆಳೆದು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದರು. ಘಟನೆ ಬಳಿಕ ಹರಿದ ಬಟ್ಟೆಯಲ್ಲಿ ನನ್ನ ಮೇಲೆ ಜನರು ಹಲ್ಲೆ ಮಾಡಿದ್ದಾರೆ ಎಂದು ಶಾಸಕ ಎಂ.ಪಿ ಕುಮಾರಸ್ವಾಮಿ ಪ್ರತ್ಯಕ್ಷವಾಗುವ ಮೂಲಕ ಗ್ರಾಮಸ್ಥರ ವಿರುದ್ಧ ಆರೋಪ ಮಾಡಿದ್ದರು. ಅಲ್ಲದೆ, ಮೊದಲು ತಮ್ಮನ್ನು ಜನರ ಗುಂಪಿನಿಂದ ಕರೆತಂದ ಪೊಲೀಸರ ವಿರುದ್ಧವೂ ಅವರು ಹರಿಹಾಯ್ದಿದ್ದರು.
ಹುಲ್ಲೆಮನೆ ಗ್ರಾಮಕ್ಕೆ ಮತ್ತೆ ಭೇಟಿ ನೀಡಿದ ಶಾಸಕ ಕುಮಾರಸ್ವಾಮಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ 8ಕ್ಕೂ ಹೆಚ್ಚು ಜನರನ್ನ ಪೊಲೀಸರು ಬಂಧಿಸಿದ್ದು, ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದಾರೆ.
ಇದನ್ನೂ ಓದಿ:ಕಾಡಾನೆ ದಾಳಿಗೆ ಮಹಿಳೆ ಬಲಿ.. ಸ್ಥಳಕ್ಕೆ ಹೋದ ಶಾಸಕನ ಮೇಲೆ ಹಲ್ಲೆ ಮಾಡಿ ಅಂಗಿ ಹರಿದ್ರಾ ಗ್ರಾಮಸ್ಥರು!?