ಚಿಕ್ಕಮಗಳೂರು : ಸಚಿವ ಸಂಪುಟ ವಿಸ್ತರಣೆ ವೇಳೆ ಹೇಗಾದ್ರೂ ತಾವೂ ಈ ಸಾರಿ ಅವಕಾಶ ಗಿಟ್ಟಿಸಿಕೊಳ್ಳಲೇಬೇಕು ಅಂತಾ ಪಣ ತೊಟ್ಟಿರುವ ಮೂಡಿಗೆರೆ ಶಾಸಕ ಎಂ ಪಿ ಕುಮಾರಸ್ವಾಮಿ ಅದಕ್ಕಾಗಿ ಲಾಬಿ ಜೋರಾಗಿಯೇ ನಡೆಸಿದ್ದಾರೆ.
ಸಿಎಂ ಭೇಟಿ ಮಾಡಿದ ಸಚಿವ ಸ್ಥಾನದ ಆಕಾಂಕ್ಷಿ ಶಾಸಕ ಎಂ ಪಿ ಕುಮಾರಸ್ವಾಮಿ - ಸಿಎಂ ಭೇಟಿ ಮಾಡಿದ ಶಾಸಕ ಎಂ ಪಿ ಕುಮಾರಸ್ವಾಮಿ
ಈ ಸಾರಿಯಾದ್ರೂ ತನಗೆ ಮಂತ್ರಿ ಸ್ಥಾನ ನೀಡಬೇಕು ಎಂದು ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳ ಬಳಿ ಮನವಿ ಮಾಡಿದ್ದು, ಈ ವೇಳೆ ಮೂಡಿಗೆರೆಯ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಶಾಸಕರಿಗೆ ಸಾಥ್ ನೀಡಿದ್ದಾರೆ..
ನಿನ್ನೆ ದಿಢೀರ್ ಆಗಿ ಮಂಗಳೂರಿಗೆ ಹೋಗಿದ್ದ ಕುಮಾರಸ್ವಾಮಿ ಅವರು, ಬಿಜೆಪಿ ರಾಜ್ಯಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರನ್ನು ಭೇಟಿಯಾಗಿ ಸಚಿವ ಸ್ಥಾನದ ಕುರಿತು ಮಾತಕತೆ ಮಾಡಿದ್ದರು. ಆದರೆ, ವಿಶೇಷ ಏನಂದ್ರೆ ಇಂದು ತಮ್ಮ ಕಾರ್ಯಕರ್ತರೊಂದಿಗೆ ಎಂ ಪಿ ಕುಮಾರಸ್ವಾಮಿ ಅವರು ಬೆಂಗಳೂರಿಗೆ ಮುಖ್ಯಮಂತ್ರಿಗಳ ನಿವಾಸಕ್ಕೆ ತೆರಳಿ, ಸಿಎಂ ಯಡ್ಡಿಯೂರಪ್ಪ ಅವರ ಜೊತೆ ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಿದ್ದಾರೆ.
ಈ ಸಾರಿಯಾದ್ರೂ ತನಗೆ ಮಂತ್ರಿ ಸ್ಥಾನ ನೀಡಬೇಕು ಎಂದು ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳ ಬಳಿ ಮನವಿ ಮಾಡಿದ್ದು, ಈ ವೇಳೆ ಮೂಡಿಗೆರೆಯ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಶಾಸಕರಿಗೆ ಸಾಥ್ ನೀಡಿದ್ದಾರೆ.
TAGGED:
MLA M P Kumaraswamy meets CM