ಚಿಕ್ಕಮಗಳೂರು:ಶಾಸಕ ಎಂ.ಪಿ.ಕುಮಾರಸ್ವಾಮಿ ಹಾಸ್ಟೆಲ್ಗೆ ಭೇಟಿ ನೀಡಿ ಲೋಟದಲ್ಲಿ ಸಾಂಬಾರ್ ತೆಗೆದುಕೊಂಡು ಅದನ್ನು ಕುಡಿಯುವುದರ ಮೂಲಕ ಗುಣಮಟ್ಟ ಪರೀಕ್ಷೆ ಮಾಡಿದ್ದಾರೆ.
ಹಾಸ್ಟೆಲ್ ಸಾಂಬಾರ್ ಕುಡಿದು ಗುಣಮಟ್ಟ ಪರೀಕ್ಷಿಸಿದ ಶಾಸಕ ಎಂ.ಪಿ.ಕುಮಾರಸ್ವಾಮಿ - ಶಾಸಕ ಎಂ ಪಿ ಕುಮಾರಸ್ವಾಮಿ ಹಾಸ್ಟೆಲ್ ಭೇಟಿ
ಶಾಸಕ ಎಂ.ಪಿ.ಕುಮಾರಸ್ವಾಮಿ ಹಾಸ್ಟೆಲ್ಗೆ ಭೇಟಿ ನೀಡಿ ಲೋಟದಲ್ಲಿ ಸಾಂಬಾರ್ ತೆಗೆದುಕೊಂಡು ಅದನ್ನು ಕುಡಿಯುವುದರ ಮೂಲಕ ಗುಣಮಟ್ಟ ಪರೀಕ್ಷೆ ಮಾಡಿದ್ದಾರೆ.
ಮೂಡಿಗೆರೆ ತಾಲೂಕಿನ ಹೆಸ್ಗಲ್ ಗ್ರಾಮದಲ್ಲಿರುವ ವಿದ್ಯಾರ್ಥಿ ನಿಲಯಕ್ಕೆ ಶಾಸಕ ಎಂ.ಪಿ.ಕುಮಾರಸ್ವಾಮಿ ಭೇಟಿ ನೀಡಿ ಲೋಟದಲ್ಲಿ ಸಾಂಬಾರ್ ತೆಗೆದುಕೊಂಡು ಅದನ್ನು ಕುಡಿಯುವುದರ ಮೂಲಕ ಆಹಾರದ ಗುಣಮಟ್ಟ ಪರೀಕ್ಷೆ ಮಾಡಿದ್ದಾರೆ. ಆಹಾರ ಸಾಮಾಗ್ರಿಗಳು ಸೇರಿದಂತೆ ಊಟ ಇನ್ನಿತರ ಮೂಲಭೂತ ಸಮಸ್ಯೆಗಳ ಬಗ್ಗೆ ವಿದ್ಯಾರ್ಥಿಗಳ ಜೊತೆ ಕುಳಿತು ಚರ್ಚೆ ಮಾಡಿದರು.
ಬಳಿಕ ಗಿರಿದರ್ಶಿನಿ ಬಾಲಕರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳೊಂದಿಗೆ ಕುಳಿತು ಮೂಲಭೂತ ಸೌಲಭ್ಯ ಹಾಗೂ ಆಹಾರದ ಗುಣಮಟ್ಟದ ಬಗ್ಗೆ ಚರ್ಚೆ ಮಾಡಿದ್ದಾರೆ. ಮೂರು ದಿನಗಳ ಹಿಂದೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಹಾಸ್ಟೆಲ್ನಲ್ಲಿನ ಅವ್ಯವಸ್ಥೆಯ ಬಗ್ಗೆ ಗಂಭೀರವಾಗಿ ಚರ್ಚೆಯಾಗಿತ್ತು. ಈ ಕುರಿತು ಶಾಸಕ ಎಂ.ಪಿ.ಕುಮಾರಸ್ವಾಮಿ ದಿಢೀರ್ ಅಂತಾ ಭೇಟಿ ನೀಡಿ ಮಕ್ಕಳ ಊಟ, ವಸತಿ, ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ.