ಚಿಕ್ಕಮಗಳೂರು: ಪ್ರವಾಹದ ಸಂದರ್ಭದಲ್ಲಿ ನಿರ್ಲಕ್ಷ್ಯ ತೋರುತ್ತಿರುವ ಕೆಲ ಬೇಜವಾಬ್ದಾರಿ ಅಧಿಕಾರಿಗಳ ವಿರುದ್ಧ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ ಅಸಮಾಧಾನ ಹೊರಹಾಕಿದರು.
ಅಧಿಕಾರಿಗಳ ವಿರುದ್ಧ ಅಸಮಾಧಾನ ಹೊರಹಾಕಿದ ಶಾಸಕ ಟಿ.ಡಿ. ರಾಜೇಗೌಡ - ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ ನ್ಯೂಸ್
ಪ್ರವಾಹಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಸಭೆ ನಡೆಸಲಾಯಿತು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ ರವಿ, ಸಂಸದೆ ಶೋಭಾ ಕರಂದ್ಲಾಜೆ, ಉಪ ಸಭಾಪತಿ ಎಸ್.ಎಲ್. ಧರ್ಮೇಗೌಡ, ಜಿಲ್ಲಾಧಿಕಾರಿ ಹಾಗೂ ಇತರೆ ಚುನಾಯಿತ ಪ್ರತಿನಿಧಿಗಳು ಹಾಜರಿದ್ದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ ರವಿ, ಸಂಸದೆ ಶೋಭಾ ಕರಂದ್ಲಾಜೆ, ಉಪ ಸಭಾಪತಿ ಎಸ್.ಎಲ್. ಧರ್ಮೇಗೌಡ, ಜಿಲ್ಲಾಧಿಕಾರಿ ಹಾಗೂ ಇತರೆ ಚುನಾಯಿತ ಪ್ರತಿನಿಧಿಗಳೊಂದಿಗೆ ಪ್ರವಾಹಕ್ಕೆ ಸಂಬಂಧಿಸಿದಂತೆ ಸಭೆ ನಡೆಸಲಾಯಿತು. ಈ ವೇಳೆ ಮಾತನಾಡಿದ ಶಾಸಕ ಟಿ.ಡಿ. ರಾಜೇಗೌಡ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪ್ರವಾಹದ ಸಂದರ್ಭದಲ್ಲಿ ಉಂಟಾಗುವ ಹಾನಿಯನ್ನು ವೀಕ್ಷಿಸಲು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸ್ವತಃ ನಾನೇ ಸ್ಥಳಕ್ಕೆ ಬಂದಾಗಲೂ ಸಹ ತಾಲೂಕು ಮಟ್ಟದ ಕೆಲ ಅಧಿಕಾರಿಗಳು ಸ್ಥಳಕ್ಕೆ ಬಾರದಿರುವುದು ಸರಿಯಲ್ಲ. ಅಧಿಕಾರಿಗಳು ಸಹ ಈ ಸಂದರ್ಭದಲ್ಲಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ಮಾಡಬೇಕು ಎಂದು ಎಲ್ಲರ ಮುಂದೆಯೇ ಶಾಸಕರು ತಾಕೀತು ಮಾಡಿದರು.