ಚಿಕ್ಕಮಗಳೂರು: ಶಂಕರಾಚಾರ್ಯರ ಪುತ್ಥಳಿ ಮೇಲೆ ಅನ್ಯ ಧರ್ಮದ ಬ್ಯಾನರ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಟಿ.ಡಿ. ರಾಜೇಗೌಡ ನೇತೃತ್ವದಲ್ಲಿ ಇಂದು ಕಾಂಗ್ರೆಸ್ ಪ್ರತಿಭಟನೆ ನಡೆಸಿತು.
ಶಂಕರಾಚಾರ್ಯರ ಪುತ್ಥಳಿಗೆ ಅವಮಾನ ಪ್ರಕರಣ: ಶಾಸಕ ರಾಜೇಗೌಡ ನೇತೃತ್ವದಲ್ಲಿ ಪ್ರತಿಭಟನೆ
ಶಂಕರಾಚಾರ್ಯರ ಪುತ್ಥಳಿ ಮೇಲೆ ಅನ್ಯ ಧರ್ಮದ ಬ್ಯಾನರ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಟಿ.ಡಿ.ರಾಜೇಗೌಡ ನೇತೃತ್ವದಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡಸಿದ್ರು.
ಶೃಂಗೇರಿಯ ಶಂಕರಾಚಾರ್ಯರ ಪುತ್ಥಳಿಯ ಮುಂಭಾಗದಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಮಾಜಿ ಸಚಿವ ಜೀವರಾಜ್ ವಿರುದ್ಧ ಪ್ರತಿಭಟನೆ ನಡೆಸಿದ್ರು. ನಂತರ ಮಾತನಾಡಿದ ಶಾಸಕ ಟಿ.ಡಿ. ರಾಜೇಗೌಡ, ವಿನಾಕಾರಣ ಜೀವರಾಜ್ ನನ್ನ ಹೆಸರು ಹೇಳಿ ದ್ವೇಷದ ರಾಜಕೀಯ ಮಾಡುತ್ತಿದ್ದಾರೆ. ಜನರಲ್ಲಿ ಕೋಮುದ್ವೇಷ ಬಿತ್ತುತ್ತಿದ್ದಾರೆ. ನನ್ನಿಂದ ಇಷ್ಟೆಲ್ಲಾ ತೊಂದರೆ ಆಗುತ್ತದೆ ಎಂದರೆ ನಾನು ರಾಜಕೀಯದಿಂದ ಹಿಂದೆ ಸರಿಯಲು ಸಿದ್ಧನಿದ್ದೇನೆ ಎಂದರು.
ಈ ಘಟನೆಯ ಹಿಂದೆ ಕಾಂಗ್ರೆಸ್ ಪಕ್ಷದವರು ಇದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದ ಜೀವರಾಜ್, ಶಾಸಕ ಟಿ.ಡಿ.ರಾಜೇಗೌಡ ಮೇಲೂ ಕಿಡಿ ಕಾರಿದ್ದರು. ಪುತ್ಥಳಿಯ ಮೇಲೆ ಅನ್ಯ ಧರ್ಮದ ಬ್ಯಾನರ್ ಹಾಕಿದ ಆರೋಪಿಯನ್ನು ಈಗಾಗಲೇ ಶೃಂಗೇರಿ ಪೊಲೀಸರು ಬಂಧಿಸಿದ್ದು,ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ.