ಚಿಕ್ಕಮಗಳೂರು: ನಗರದ ಬಿಜೆಪಿ ಮುಖಂಡರು ಶ್ರಮದಾನ ನಡೆಸಿ ಪ್ರಧಾನಿ ನರೇಂದ್ರ ಮೋದಿ 69 ನೇ ಹುಟ್ಟುಹಬ್ಬವನ್ನು ವಿಭಿನ್ನವಾಗಿ ಆಚರಿಸಿದ್ದಾರೆ.
ಮೋದಿ ಹುಟ್ಟುಹಬ್ಬ, ಆಸ್ಪತ್ರೆ ಆವರಣ ಸ್ವಚ್ಛಗೊಳಿಸಿ ಅರಿವು ಮೂಡಿಸಿದ ಬಿಜೆಪಿ ಕಾರ್ಯಕರ್ತರು - Modi's birthday
ಇಂದು ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ ಹಿನ್ನೆಲೆ ಚಿಕ್ಕಮಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಸ್ವಚ್ಚತೆಯ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಿದ್ದಾರೆ.
ಸ್ಪತ್ರೆ ಆವರಣ ಸ್ವಚ್ಚಗೊಳಿಸಿ ಅರಿವು ಮೂಡಿಸಿದ ಬಿಜೆಪಿ ಕಾರ್ಯಕರ್ತರು
ದೇಶಾದ್ಯಂತ ಬಿಜೆಪಿ ಕಾರ್ಯಕರ್ತರು ಮೋದಿ ಹುಟ್ಟುಹಬ್ಬ ಅಚರಣೆ ಮಾಡುತ್ತಿದ್ದು, ಪ್ಲಾಸ್ಟಿಕ್, ಸ್ವಚ್ಚತೆ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ವಿವಿಧ ಆಸ್ಪತ್ರೆಗಳ ಆವರಣಗಳನ್ನು ಸಂಪೂರ್ಣವಾಗಿ ಸ್ವಚ್ಚ ಮಾಡಿದ್ದಾರೆ.
ಇನ್ನು ಶೌಚಾಲಯ ಸ್ವಚ್ಚಗೊಳಿಸಿ ಸಾರ್ವಜನಿಕರಿಗೆ ಮತ್ತು ಆಸ್ಪತ್ರೆ ಸಿಬ್ಬಂದಿಗೆ ಸ್ವಚ್ಚತೆ ಕಾಪಾಡಿಕೊಳ್ಳುವಂತೆ ಮನವಿ ಮಾಡಿದ್ದಾರೆ.