ಚಿಕ್ಕಮಗಳೂರು:ಜಿಲ್ಲೆಯ, ಮೂಡಿಗೆರೆ ತಾಲೂಕಿನ ಮಲೆನಾಡು ಭಾಗದಲ್ಲಿ ದಿನದಿಂದ ದಿನಕ್ಕೆ ಕಾಡಾನೆಗಳ ಹಾವಳಿ ಹೆಚ್ಚಾಗುತ್ತಲೇ ಇದೆ. ಪ್ರತಿ ನಿತ್ಯ ಕಾಡಾನೆಗಳ ಹಾವಳಿಗೆ ಕಾಡಂಚಿನ ಪ್ರದೇಶದ ಗ್ರಾಮಗಳು ಕಂಗಾಲಾಗಿವೆ.
ಕಾಫಿ ತೋಟದಲ್ಲಿ ಹತ್ತಕ್ಕೂ ಹೆಚ್ಚು ಕಾಡಾನೆಗಳ ಹಿಂಡು: ಕಾಡಂಚಿನ ಗ್ರಾಮಗಳು ಕಂಗಾಲು
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕಳೆದ ಚಂದ್ರಾಪುರ ಎಸ್ಟೇಟ್ನಲ್ಲಿ ಎರಡು ದಿನಗಳಿಂದ ಹತ್ತಕ್ಕೂ ಹೆಚ್ಚು ಕಾಡಾನೆಗಳು ಬೀಡು ಬಿಟ್ಟಿದ್ದು ಜನ ಕಂಗಾಲಾಗಿದ್ದಾರೆ.
ಕಾಡಾನೆಗಳ ಹಿಂಡು
ಈ ಭಾಗದಲ್ಲಿ ನಿರಂತರವಾಗಿ ಕಾಡಾನೆಗಳ ಹಿಂಡು ಲಗ್ಗೆ ಇಡುತ್ತಿದೆ. ಕಾಫಿ, ಅಡಕೆ, ಮೆಣಸು ಬೆಳೆಗಳನ್ನು ನಾಶ ಮಾಡಿದೆ. ಮೂಡಿಗೆರೆ ತಾಲೂಕಿನ ಕಳೆದ ಚಂದ್ರಾಪುರ ಎಸ್ಟೇಟ್ನಲ್ಲಿ ಎರಡು ದಿನಗಳಿಂದ ಹತ್ತಕ್ಕೂ ಹೆಚ್ಚು ಕಾಡಾನೆಗಳು ಬೀಡು ಬಿಟ್ಟಿವೆ. ಇವುಗಳನ್ನು ಕಾಡಿಗೆ ಓಡಿಸಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.
ಇದನ್ನೂ ಓದಿ:ಟೆಸ್ಟ್ ಕ್ರಿಕೆಟ್ನಲ್ಲಿ ಗರಿಷ್ಠ ವಿಕೆಟ್: ಅನಿಲ್ ಕುಂಬ್ಳೆ ದಾಖಲೆ ಸರಿಗಟ್ಟಿದ ಜೇಮ್ಸ್ ಆ್ಯಂಡರ್ಸನ್