ಚಿಕ್ಕಮಗಳೂರು: ಬೆಂಗಳೂರು ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ತೆರಳುತ್ತಿದ್ದ 30 ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಗರದಲ್ಲಿ ನಡೆದಿದೆ. ಇಲ್ಲಿನ ಪ್ರವಾಸಿ ಮಂದಿರದ ಬಾಗಿಲಲ್ಲಿ ಕೆಪಿಸಿಸಿ ಕಿಸಾನ್ ಸೆಲ್ ಅಧ್ಯಕ್ಷ ಸಚಿನ್ ಮೀಗಾ ಸೇರಿದಂತೆ 30 ಕ್ಕೂ ಹೆಚ್ಚು ಜನರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಚಿಕ್ಕಮಗಳೂರು: 30 ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ವಶಕ್ಕೆ - ಚಿಕ್ಕಮಗಳೂರು ಕಾಂಗ್ರೆಸ್ ಪ್ರತಿಭಟನೆ
10 ಕ್ಕೂ ಹೆಚ್ಚು ವಾಹನಗಳಲ್ಲಿ ಮೋದಿ ಗೋ ಬ್ಯಾಕ್ ಘೋಷಣೆ ಕೂಗಲು ಬೆಂಗಳೂರಿನ ಏರ್ಪೋರ್ಟ್ ಕಡೆ ಹೊರಟಿದ್ದ ಕೆಪಿಸಿಸಿ ಕಿಸಾನ್ ಸೆಲ್ ಅಧ್ಯಕ್ಷ ಸಚಿನ್ ಮೀಗಾ ಸೇರಿದಂತೆ 30 ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
30 ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ವಶಕ್ಕೆ
ಈ ವೇಳೆ ಕಾರ್ಯಕರ್ತರು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. 10ಕ್ಕೂ ಹೆಚ್ಚು ವಾಹನಗಳಲ್ಲಿ ಮೋದಿ ಗೋ ಬ್ಯಾಕ್ ಘೋಷಣೆ ಕೂಗಲು ಬೆಂಗಳೂರಿನ ಏರ್ಪೋರ್ಟ್ ಕಡೆ ಹೊರಟಿದ್ದರು.
ಇದನ್ನೂ ಓದಿ:ಮೋದಿ ಆಗಮನ ಹಿನ್ನೆಲೆ ಬೆಂಗಳೂರು ರಸ್ತೆ ಸಂಚಾರದಲ್ಲಿ ಬದಲಾವಣೆ: ಪರ್ಯಾಯ ಮಾರ್ಗ ಎಲ್ಲೆಲ್ಲಿ?