ಚಿಕ್ಕಮಗಳೂರು :ತಾಯಿ ತನ್ನ ಇಬ್ಬರು ಪುಟ್ಟ ಕಂದಮ್ಮಗಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಎನ್ಆರ್ಪುರ ತಾಲೂಕು ಹುಣಸೆ ಕೊಪ್ಪ ಗ್ರಾಮದಲ್ಲಿ ನಡೆದಿದೆ.
ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ - Mother suicide with childre's
ಕೌಟುಂಬಿಕ ಕಲಹದಿಂದ ತಾಯಿ ಹಾಗೂ ಇಬ್ಬರು ಮಕ್ಕಳು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ..
ತಾಯಿ ಮಕ್ಕಳು ಆತ್ಮಹತ್ಯೆ
ಲಕ್ಷ್ಮಿ(35 ) ಸೌಜನ್ಯ ( 5) ಆದ್ಯ (2) ಮೃತ ದುರ್ದೈವಿಗಳು. ಈ ಮೂರು ಜನ ಕಳೆದ ಮೂರು ದಿನದ ಹಿಂದೆ ಬಾಳೆಹೊನ್ನೂರು ಸಮೀಪದ ಕರ್ಕೇಶ್ವರ ಗ್ರಾಮದಿಂದ ನಾಪತ್ತೆಯಾಗಿದ್ದರು. ಇಂದು ಮೂವರ ಶವ ಹುಣಸೆಕೊಪ್ಪ ಗ್ರಾಮದ ಕೆರೆಯಲ್ಲಿ ಪತ್ತೆಯಾಗಿದೆ.
ಕೌಟುಂಬಿಕ ಕಲಹದಿಂದ ತಾಯಿ ಹಾಗೂ ಇಬ್ಬರು ಮಕ್ಕಳು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಬಾಳೆಹೊನ್ನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.