ಚಿಕ್ಕಮಗಳೂರು:ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿರುವ ಆರ್ಥಿಕ ಪ್ಯಾಕೇಜ್ಅನ್ನು ಸಂಸದೆ ಶೋಭಾ ಕರಂದ್ಲಾಜೆ ಶ್ಲಾಘಿಸಿದ್ದಾರೆ.
ಎಲ್ಲಾ ವರ್ಗದ ಜನರಿಗೂ ಆರ್ಥಿಕ ಪ್ಯಾಕೇಜ್ ಅನುಕೂಲವಾಗಲಿದೆ: ಶೋಭಾ ಕರಂದ್ಲಾಜೆ - ಆರ್ಥಿಕ ಪ್ಯಾಕೇಜ್ ಘೋಷಿಸಿದ ಸಿಎಂ
ಸಿಎಂ ಯಡಿಯೂರಪ್ಪ ಘೋಷಿಸಿರುವ ಆರ್ಥಿಕ ಪ್ಯಾಕೇಜ್ನಿಂದ ಸಂಕಷ್ಟದಲ್ಲಿರುವ ಎಲ್ಲಾ ವರ್ಗದ ಜನರಿಗೂ ನೆರವಾಗಲಿದೆ. ಪ್ಯಾಕೇಜ್ ಜೊತೆಗೆ ಲಸಿಕೆ ಬಗ್ಗೆಯೂ ಆದ್ಯತೆ ನೀಡಿರುವುದು ಉತ್ತಮ ನಿರ್ಧಾರ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಶೋಭಾ ಕರಂದ್ಲಾಜೆ
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲಾಕ್ಡೌನ್ನಿಂದ ಸಂಕಷ್ಟದಲ್ಲಿರುವ ಎಲ್ಲಾ ವರ್ಗದ ಜನರಿಗೂ ಈ ಪ್ಯಾಕೇಜ್ನಿಂದ ಅನುಕೂಲವಾಗಲಿದೆ. ಮುಖ್ಯಮಂತ್ರಿಗಳು ಉತ್ತಮ ನಿರ್ಧಾರ ತೆಗೆದುಕೊಂಡಿದ್ದಾರೆ. ಪ್ಯಾಕೇಜ್ ಜೊತೆಗೆ ಲಸಿಕೆ ಬಗ್ಗೆಯೂ ಆದ್ಯತೆ ನೀಡಿರುವುದು ಉತ್ತಮ ನಿರ್ಧಾರ ಎಂದಿದ್ದಾರೆ.
ಓದಿ:ಶಿಕ್ಷಕರು, ಸಿಲಿಂಡರ್ ಡಿಲಿವರಿ ಬಾಯ್ಸ್, ಲೈನ್ಮೆನ್ಗಳನ್ನು ಫ್ರಂಟ್ ಲೈನ್ ವಾರಿಯರ್ಸ್ ಎಂದು ಪರಿಗಣನೆ: ಸಿಎಂ