ಚಿಕ್ಕಮಗಳೂರು:ರೈತ ಹೋರಾಟಗಾರಕೋಡಿಹಳ್ಳಿ ಚಂದ್ರಶೇಖರ್ ಸಾರಿಗೆ ಹೋರಾಟಕ್ಕೆ ಬಂದಿದ್ದಾರೆ ಅಂದ್ರೆ ಅವರ ಹಿಂದೆ ಯಾವುದೋ ಒಂದು ರಾಜಕೀಯ ಪಕ್ಷದ ಕೈವಾಡವಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಶಂಕೆ ವ್ಯಕ್ತಪಡಿಸಿದ್ದಾರೆ.
ಸಾರಿಗೆ ನೌಕರರ ಮುಷ್ಕರ ಕುರಿತು ಮಾತನಾಡಿದ ಇವರು, ಕೋಡಿಹಳ್ಳಿ ಚಂದ್ರಶೇಖರ್ ರೈತರ ಬಿಲ್ ಹಿಡಿದು ಹೋರಾಟ ಮಾಡಿದ್ದರು. ಅದಕ್ಕೆ ಕಾಂಗ್ರೆಸ್ ಮುಂಖಡರು ಬೆಂಬಲ ಸೂಚಿಸಿದ್ದರು. ಇದೀಗ ಅದೇ ರೈತ ಹೋರಾಟಗಾರ ಸಾರಿಗೆ ಹೋರಾಟಕ್ಕೆ ಬಂದಿದ್ದಾರೆ ಅಂದ್ರೆ ಯಾವುದೋ ಒಂದು ರಾಜಕೀಯ ಪಕ್ಷ ಅವರನ್ನು ನಿಯಂತ್ರಣ ಮಾಡುತ್ತಿದೆಯಾ ಎಂಬ ಸಂಶಯ ಮೂಡುತ್ತಿದೆ ಎಂದರು.