ಚಿಕ್ಕಮಗಳೂರು: ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದೆ ಎನ್ನುವ ಕಾರಣಕ್ಕೆ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಇದೆಲ್ಲವೂ ರಾಜಕೀಯ ಪ್ರೇರಿತ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.
ಡಿಕೆಶಿ ಬಂಧನ, ಕೈ ಕಾರ್ಯಕರ್ತರ ಪ್ರತಿಭಟನೆ ಬಗ್ಗೆ ಸಂಸದೆ ಶೋಭಾ ಕರಂದ್ಲಾಜೆ ಏನಂದ್ರು? - news kannada
ಹಣ ಅವ್ಯವಹಾರ ಪ್ರಕರಣ ಸಂಬಂಧ ನಿನ್ನೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಬಂಧಿನವಾಗಿದೆ. ಈ ಸಂಬಂಧ ಕೈ ಕಾರ್ಯಕರ್ತರು ಇದು ರಾಜಕೀಯ ಪ್ರೇರಿತ ಎಂದು ಬಿಜೆಪಿ ನಾಯಕರ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದಾರೆ. ಈ ಬಗ್ಗೆ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನ ಹಿನ್ನೆಲೆ ಹಾಗೂ ರಾಜ್ಯಾದ್ಯಂತ ನಡೆಸುತ್ತಿರುವ ಕೈ ಕಾರ್ಯಕರ್ತರ ಪ್ರತಿಭಟನೆ ಕುರಿತು ನಗರದಲ್ಲಿ ಮಾತನಾಡಿದ ಅವರು, ಇಡಿ ಹಾಗೂ ಐಟಿ ಕಾನೂನಿನಡಿಯಲ್ಲಿ ಕೆಲಸ ಮಾಡುತ್ತಿವೆ. ಕಳೆದ ಎರಡು ವರ್ಷಗಳಿಂದ ನಡೆಯುತ್ತಿರುವ ತನಿಖೆ ಇದು. ಸಮಗ್ರ ತನಿಖೆ ನಡೆಸಿದ ಮೇಲೆಯೇ ಕಾನೂನಿನ ಕ್ರಮ ಕೈಗೊಂಡಿರಬಹುದು. ಯುಪಿಎ ಸರ್ಕಾರದ ಅವಧಿಯಲ್ಲೂ ದೇಶಾದ್ಯಂತ ಸಾವಿರಾರು ಜನರ ಮೇಲೆ ಕ್ರಮವಾಗಿದೆ. ಹಾಗಾದರೆ ಅವೆಲ್ಲಾ ರಾಜಕೀಯ ಪ್ರೇರಿತನಾ ಎಂದು ಪ್ರಶ್ನಿಸಿದರು. ಇಡಿ ಸ್ವಯತ್ತ ಸಂಸ್ಥೆ. ಈ ಎಲ್ಲ ಸಂಸ್ಥೆಗಳು ಕಾನೂನು ಅಡಿಯಲ್ಲಿಯೇ ಕೆಲಸ ಮಾಡುತ್ತಿವೆ. ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಮಾತ್ರ ಕ್ರಮ ಕೈಗೊಂಡಿಲ್ಲ. ರಾಜ್ಯದಲ್ಲಿ ಹಿಂದೆಯೂ ಹಲವರು ಜೈಲಿಗೆ ಹೋಗಿದ್ದಾರೆ. ಹಲವರ ಮೇಲೆ ಅನವಶ್ಯಕ ಕ್ರಮ ಕೈಗೊಂಡಿರುವುದನ್ನು ರಾಜ್ಯ ನೋಡಿದೆ ಎಂದರು.