ಕರ್ನಾಟಕ

karnataka

ETV Bharat / state

ಮೂಡಿಗೆರೆ: ಬೈಕ್​ ಸವಾರನನ್ನು ಅಟ್ಟಾಡಿಸಿದ ಒಂಟಿ ಸಲಗ - Guttihalli in Mudigere

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗುತ್ತಿಹಳ್ಳಿ ಸಮೀಪ ಬೈಕ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ಕಾಡಾನೆ ಅಟ್ಟಾಡಿಸಿಕೊಂಡು ಬಂದಿದ್ದು, ಅದೃಷ್ಟವಶಾತ್​ ಆತ ತಪ್ಪಿಸಿಕೊಂಡು ಪರಾರಿಯಾಗಿರುವ ಘಟನೆ ನಡೆದಿದೆ.

Mudigere: Wild elephant attacks on bike rider
ಮೂಡಿಗೆರೆ: ಬೈಕ್​ ಸವಾರನನ್ನು ಅಟ್ಟಾಡಿಸಿದ ಒಂಟಿ ಸಲಗ

By

Published : Mar 19, 2020, 2:35 PM IST

ಚಿಕ್ಕಮಗಳೂರು: ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಬೈಕ್ ಸವಾರನನ್ನು ಕಾಡಾನೆ ಅಟ್ಟಾಡಿಸಿಕೊಂಡು ಬಂದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗುತ್ತಿಹಳ್ಳಿಯಲ್ಲಿ ನಡೆದಿದೆ.

ಬೈಕ್ ನಲ್ಲಿ ಸುನೀಲ್ ಎಂಬ ವ್ಯಕ್ತಿ ಹೋಗುತ್ತಿದ್ದ ವೇಳೆ ಈ ಒಂಟಿ ಸಲಗ ಅಟ್ಟಾಡಿಸಿಕೊಂಡು ಬಂದಿದೆ. ಅದೃಷ್ಟವಶಾತ್​ ಸುನೀಲ್ ರಸ್ತೆಯಲ್ಲಿಯೇ ಬೈಕ್ ಬಿಟ್ಟು ಓಡಿಹೋಗಿ ಜೀವ ಉಳಿಸಿಕೊಂಡಿದ್ದಾರೆ. ಈ ಕಾಡಾನೆ ಭಯದಿಂದಾ ಗ್ರಾಮದ ರಸ್ತೆಗಳಲ್ಲಿ ಸಾರ್ವಜನಿಕರು ಸಂಚಾರ ಮಾಡೋದಕ್ಕೂ ಹೆದರುವಂತಾಗಿದೆ.

ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ಮೀತಿ ಮೀರಿ ಹೋಗುತ್ತಿದೆ. ಕೂಡಲೇ ಅರಣ್ಯ ಇಲಾಖೆಯ ಅಧಿಕಾರಿಗಳು ಆನೆಯನ್ನು ಹಿಡಿದು ಕಾಡಿಗಟ್ಟುವಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಮನವಿ ಮಾಡಿಕೊಂಡಿದ್ದಾರೆ.

ABOUT THE AUTHOR

...view details