ಚಿಕ್ಕಮಗಳೂರು :ಹಣಕಾಸಿನ ವಿಚಾರಕ್ಕೆ ಸ್ನೇಹಿತರೇ ಗೆಳೆಯನನ್ನು ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಎಪಿಎಂಸಿ ಯಾರ್ಡ್ನಲ್ಲಿ ನಡೆದಿದೆ. ಮೃತನನ್ನು 30 ವರ್ಷದ ಓಂಕಾರ ಎಂದು ಗುರುತಿಸಲಾಗಿದೆ. ಕೊಲೆಗೆ ಸಂಬಂಧಿಸಿದಂತೆ ಧನರಾಜ್, ವಿಜಯ್ ಹಾಗೂ ಸುನಿಲ್ ಎಂಬ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಇನ್ನು ತಲೆಮರೆಸಿಕೊಂಡಿರುವ ಉಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ.
ಚಿಕ್ಕಮಗಳೂರು: ಹಣಕಾಸಿನ ವಿಚಾರಕ್ಕೆ ಸ್ನೇಹಿತನ ಕೊಲೆ - ತರೀಕೆರೆ ಪೊಲೀಸ್ ಠಾಣೆ
ಆರೋಪಿಗಳು ಹಾಗೂ ಕೊಲೆಯಾದ ಓಂಕಾರ ಎಲ್ಲರೂ ಸ್ನೇಹಿತರಾಗಿದ್ದು ಫೈನಾನ್ಸ್ ವ್ಯವಹಾರ ಮಾಡುತ್ತಿದ್ದರು. ನಿನ್ನೆ ರಾತ್ರಿ 10.30ರ ಸುಮಾರಿಗೆ ಮನೆಯಲ್ಲಿದ್ದ ಓಂಕಾರನನ್ನು ಸ್ನೇಹಿತರೆ ಎಪಿಎಂಸಿ ಯಾರ್ಡ್ಗೆ ಕರೆದುಕೊಂಡು ಬಂದಿದ್ದು, ಎಲ್ಲರೂ ಯಾರ್ಡ್ನಲ್ಲಿ ಮಾತು ಕತೆ ನಡೆಸಿದ್ದಾರೆ.
ಆರೋಪಿಗಳು ಹಾಗೂ ಕೊಲೆಯಾದ ಓಂಕಾರ ಎಲ್ಲರೂ ಸ್ನೇಹಿತರಾಗಿದ್ದು ಫೈನಾನ್ಸ್ ವ್ಯವಹಾರ ಮಾಡುತ್ತಿದ್ದರು. ನಿನ್ನೆ ರಾತ್ರಿ 10.30ರ ಸುಮಾರಿಗೆ ಮನೆಯಲ್ಲಿದ್ದ ಓಂಕಾರನನ್ನು ಸ್ನೇಹಿತರೇ ಎಪಿಎಂಸಿ ಯಾರ್ಡ್ಗೆ ಕರೆದುಕೊಂಡು ಬಂದಿದ್ದು, ಎಲ್ಲರೂ ಯಾರ್ಡ್ನಲ್ಲಿ ಮಾತು ಕತೆ ನಡೆಸಿದ್ದಾರೆ. ಈ ವೇಳೆ ಹಣದ ವಿಚಾರಕ್ಕೆ ಸಂಬಧಿಸಿ ಗೆಳೆಯ ಓಂಕಾರನನ್ನೇ ಉಳಿದ ಸ್ನೇಹಿತರು ಕಲ್ಲಿನಿಂದ ಹೊಡೆದು ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಈ ಪ್ರಕರಣ ತರೀಕೆರೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಇದನ್ನೂ ಓದಿ :ಕಾಲಿನ ಮೇಲೆ ಅರ್ಧಗಂಟೆಗೂ ಹೆಚ್ಚು ಕಾಲ ಬಸ್ ಚಕ್ರ: ನರಳಿ ಪ್ರಾಣಬಿಟ್ಟ ಮಹಿಳೆ