ಚಿಕ್ಕಮಗಳೂರು: ಕಾಲೇಜು ಆವರಣದಲ್ಲಿ ವ್ಯಕ್ತಿಯೋರ್ವ ಕೊಲೆಯಾಗಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಶೆಟ್ರು ಸಿದ್ದಪ್ಪ ಕಾಲೇಜು ಆವರಣದಲ್ಲಿ ಈ ಘಟನೆ ನಡೆದಿದೆ.
ಚಿಕ್ಕಮಗಳೂರಿನ ಅಜ್ಜಂಪುರ ಕಾಲೇಜು ಆವರಣದಲ್ಲಿ ವ್ಯಕ್ತಿ ಕೊಲೆ - ಚಿಕ್ಕಮಗಳೂರಿನ ಅಜ್ಜಂಪುರ ಕಾಲೇಜು
ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಕಾಲೇಜು ಆವರಣದಲ್ಲಿ ವ್ಯಕ್ತಿಯೋರ್ವ ಕೊಲೆಯಾಗಿದ್ದಾನೆ.
ಚಿಕ್ಕಮಗಳೂರಿನ ಅಜ್ಜಂಪುರ ಕಾಲೇಜು ಆವರಣದಲ್ಲಿ ವ್ಯಕ್ತಿ ಕೊಲೆ
ಚೆಲುವ (36) ಕೊಲೆಯಾದ ವ್ಯಕ್ತಿ. ಮೃತ ವ್ಯಕ್ತಿ ಮೂಲತಃ ಕೋಲಾರ ಜಿಲ್ಲೆಯವನಾಗಿದ್ದು, ಕಳೆದ 3 ವರ್ಷಗಳಿಂದ ಕೂಲಿ ಮಾಡಿಕೊಂಡು ಅಜ್ಜಂಪುರದಲ್ಲಿ ವಾಸವಾಗಿದ್ದ. ಕಳೆದ ರಾತ್ರಿ ಕಾಲೇಜು ಆವರಣದಲ್ಲಿ ರಕ್ತದ ಮಡುವಿನಲ್ಲಿ ಈತನ ಮೃತದೇಹ ಪತ್ತೆಯಾಗಿದೆ. ತಲೆಗೆ ಬಲವಾಗಿ ಹೊಡೆದಿರುವುದರಿಂದ ರಕ್ತಸಾವ್ರದಿಂದ ಸಾವನ್ನಪ್ಪಿದ್ದಾನೆ ಎಂಬ ಮಾಹಿತಿ ದೊರೆತಿದೆ.
ಕೊಲೆಗೆ ಕಾರಣವೇನು?, ಯಾರು ಮಾಡಿದ್ದಾರೆ? ಎಂಬುದು ಇನ್ನೂ ತಿಳಿದು ಬಂದಿಲ್ಲ. ಸ್ಥಳಕ್ಕೆ ಭೇಟಿ ನೀಡಿದ ಅಜ್ಜಂಪುರ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.