ಕರ್ನಾಟಕ

karnataka

ETV Bharat / state

ರಾಜ್ಯದಲ್ಲಿ ನೆರೆಯನ್ನು ಅತ್ಯಂತ ಸಮರ್ಥವಾಗಿ ನಿರ್ವಹಿಸಿದ ಸಿಎಂ ಯಡಿಯೂರಪ್ಪ: ನಳೀನ್ ಕುಮಾರ್ ಕಟೀಲ್ - ಬಿಜೆಪಿ ರಾಜ್ಯಧ್ಯಕ್ಷ ನಳೀನ್ ಕುಮಾರ್ ಕಟೀಲ್

ನಾನು ಕಳೆದ 20 ವರ್ಷಗಳಿಂದ ರಾಜಕೀಯದಲ್ಲಿದ್ದೇನೆ. ಆದ್ರೆ ರಾಜ್ಯದಲ್ಲಿ ನೆರೆಯನ್ನು ಇಷ್ಟು ಸಮರ್ಥವಾಗಿ ನಿರ್ವಹಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ರು.

ನಳೀನ್ ಕುಮಾರ್ ಕಟೀಲ್

By

Published : Nov 10, 2019, 5:11 PM IST

ಚಿಕ್ಕಮಗಳೂರು :ನಾನು ಕಳೆದ 20 ವರ್ಷಗಳಿಂದ ರಾಜಕೀಯದಲ್ಲಿದಲ್ಲಿದ್ದೇನೆ. ಆದ್ರೆರಾಜ್ಯದಲ್ಲಿನೆರೆಯನ್ನು ಇಷ್ಟು ಸಮರ್ಥವಾಗಿ ನಿರ್ವಹಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ರು. ಜೊತೆಗೆ ಸಿಎಂ ಮತ್ತು ನನ್ನ ಮಧ್ಯೆ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳಿಲ್ಲ ಎಂದು ಎಂದು ಅವರು ಇದೇ ವೇಳೆ ಸ್ಪಷ್ಟಪಡಿಸಿದ್ರು.

ಬಿಜೆಪಿ ರಾಜ್ಯಧ್ಯಕ್ಷರಾದ ಮೇಲೆ ಮೊದಲ ಬಾರಿಗೆ ಚಿಕ್ಕಮಗಳೂರಿಗೆ ಆಗಮಿಸಿದ ಕಟೀಲ್, ಬಿಜೆಪಿ ಜಿಲ್ಲಾ ಕಚೇರಿಗೆ ಭೇಟಿ ನೀಡಿ ನಂತರ ಮಾಧ್ಯಮಗಳ ಜೊತೆ ಮಾತನಾಡಿದ್ರು.

ರಾಜ್ಯದಲ್ಲಿ ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ಸರ್ಕಾರ 100 ದಿನ ಪೂರೈಸಿದೆ. ಸಚಿವ ಸಿ.ಟಿ. ರವಿ ನೇತೃತ್ವದಲ್ಲಿ ಒಂದು ಒಳ್ಳೆಯ ತಂಡ ಸಿಎಂ ಜೊತೆಗಿದ್ದು ಅದ್ಬುತವಾದ ಕೆಲಸಗಳನ್ನು ಮಾಡುತ್ತಿದೆ ಎಂದು ಕಟೀಲ್ ಹೇಳಿದ್ರು.

ಯಡಿಯೂರಪ್ಪನವರು ಅಧಿಕಾರ ಸ್ವೀಕರಿಸಿದಾಗ ಅವರ ಮುಂದೆ ಸಾಕಷ್ಟು ಸವಾಲುಗಳಿದ್ದವು. ಮುಖ್ಯವಾಗಿ ನೆರೆ ಮತ್ತು ಬರ ಎದುರಾಗಿದ್ದವು. ಸಿಎಂ ಯಡಿಯೂರಪ್ಪನವರು ಇದನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದ್ರು.
ಬಿಜೆಪಿ ರಾಜ್ಯಧ್ಯಕ್ಷ ನಳೀನ್ ಕುಮಾರ್ ಕಟೀಲ್

ಇನ್ನು, ಮುಖ್ಯಮಂತ್ರಿಗಳ ಜೊತೆಗಿನ ಭಿನ್ನಾಭಿಪ್ರಾಯಕ್ಕೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಕಟೀಲ್, ಯಡಿಯೂರಪ್ಪ ಪಕ್ಷದಲ್ಲಿ ಹಿರಿಯರು. ಅವರ ಬಗ್ಗೆ ನಾವು ತಪ್ಪುಕಲ್ಪನೆ ಇಟ್ಟುಕೊಳ್ಳಲು ಸಾಧ್ಯವಿಲ್ಲ. ನಾವು ನಿರಂತರವಾಗಿ ಮಾತುಕತೆ ನಡೆಸುತ್ತೇವೆ. ನಮ್ಮಲ್ಲಿ ಯಾವುದೇ ವಿಚಾರವಿದ್ದರೂ ನನ್ನ ಗಮನಕ್ಕೆ ಅವರು ತರುತ್ತಾರೆ, ಅವರ ಗಮನಕ್ಕೆ ನಾನು ತಂದು ಪರಸ್ಪರ ಬಗೆಹರಿಸಿಕೊಳ್ಳುತ್ತೇವೆ. ನಮ್ಮ ಪಕ್ಷದಲ್ಲಿ ಓರ್ವ ವ್ಯಕ್ತಿ ತೀರ್ಮಾನ ತೆಗೆದುಕೊಳ್ಳುವುದಿಲ್ಲ. ಹಾಗಾಗಿ ನನ್ನ ಮತ್ತು ಮುಖ್ಯಮಂತ್ರಿಗಳ ನಡುವೆ ಉತ್ತಮ ಸಂಬಂಧವಿದೆ ಎಂದು ಸ್ಪಷ್ಟಪಡಿಸಿದ್ರು.

ABOUT THE AUTHOR

...view details