ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಈ ದಿನ 9 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 141 ಕ್ಕೆ ಏರಿಕೆಯಾಗಿದೆ.
ಭಾನುವಾರ ಜಿಲ್ಲಾ ಕೋವಿಡ್-19 ಆಸ್ಪತ್ರೆಯಿಂದ ಇಬ್ಬರು ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ ಒಟ್ಟು 84 ಜನ ಸೋಂಕಿತರು ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸೋಂಕು ಮುಕ್ತರಾಗಿದ್ದಾರೆ. ಚಿಕ್ಕಮಗಳೂರು ತಾಲೂಕಿನಲ್ಲಿ ಇಬ್ಬರಲ್ಲಿ ಸೋಂಕು ಕಾಣಿಸಿಕೊಂಡರೆ, ಕಡೂರು, ಶೃಂಗೇರಿ ಹಾಗು ತರೀಕೆರೆಯಲ್ಲಿ ತಲಾ ಓರ್ವ ವ್ಯಕ್ತಿ, ಮೂಡಿಗೆರೆಯಲ್ಲಿ ಇಬ್ಬರು, ಕೊಪ್ಪ ತಾಲೂಕಿನ ಇಬ್ಬರಲ್ಲಿ ಸೋಂಕು ಪತ್ತೆಯಾಗಿದೆ.