ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮೇ 31ಕ್ಕೆ ಕಠಿಣ ಲಾಕ್ಡೌನ್ ಮುಕ್ತಾಯವಾದ ಹಿನ್ನೆಲೆಯಲ್ಲಿ ಇಂದಿನಿಂದ ಹೊಸ ಮಾರ್ಗಸೂಚಿ ಜಾರಿಯಾಗಲಿದೆ.
ಇಂದಿನಿಂದ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ನಗರ ಪ್ರದೇಶದಿಂದ ಗ್ರಾಮೀಣ ಪ್ರದೇಶ ಓಡಾಟಕ್ಕೆ ನಿಷೇಧ ಹೇರಲಾಗಿದೆ. ಹಾಪ್ಕಾಮ್ಸ್ ವಾಹನಗಳಿಗೆ ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಮನೆ ಮನೆಗೆ ತರಕಾರಿ, ಹಣ್ಣು ದೊರಕಿಸಲು ಅವಕಾಶ ಕಲ್ಪಿಸಲಾಗಿದೆ. ಜೊತೆಗೆ ಸೂಪರ್ ಮಾರ್ಕೆಟ್ಗಳಿಗೆ ಹೋಮ್ ಡೆಲಿವರಿಗೆ ಅವಕಾಶ ನೀಡಲಾಗಿದೆ.