ಚಿಕ್ಕಮಗಳೂರು :ಹೊಸ ವರ್ಷಾಚರಣೆ ಹಿನ್ನೆಲೆ ಚಿಕ್ಕಮಗಳೂರಿನ ಪ್ರವಾಸಿ ತಾಣವಾದ ಮುಳ್ಳಯ್ಯನಗಿರಿ ಪ್ರದೇಶಕ್ಕೆ ರಾಜ್ಯದೆಲ್ಲೆಡೆಯಿಂದ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಇದರಿಂದಾಗಿ ಟ್ರಾಫಿಕ್ ಸಮಸ್ಯೆ ಹೆಚ್ಚಿದೆ.
ಹೊಸ ವರ್ಷಾಚರಣೆ ಹಿನ್ನೆಲೆ ಮುಳ್ಳಯ್ಯನಗಿರಿಯಲ್ಲಿ ಟ್ರಾಫಿಕ್ ಜಾಮ್... - ಮುಳ್ಳಯ್ಯನಗಿರಿಯಲ್ಲಿ ಟ್ರಾಫಿಕ್ ಜಾಮ್
ಸಾಗರೋಪಾದಿಯಲ್ಲಿ ಪ್ರವಾಸಿಗರು ಮುಳ್ಳಯ್ಯನ ಗಿರಿಗೆ ಬಂದಿರುವ ಹಿನ್ನಲೆ ಸಂಪೂರ್ಣವಾಗಿ ಗಿರಿ ಪ್ರದೇಶದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಪ್ರವಾಸಿಗರು ಟ್ರಾಫಿಕ್ ಮಧ್ಯೆ ಸಿಲುಕಿಕೊಂಡು ಎಂಜಾಯ್ ಮಾಡಲು ಆಗದೆ ಪರದಾಡಿದ್ದಾರೆ.
ಸಾಗರೋಪಾದಿಯಲ್ಲಿ ಪ್ರವಾಸಿಗರು ಮುಳ್ಳಯ್ಯನಗಿರಿಗೆ ಬಂದಿರುವ ಹಿನ್ನೆಲೆ ಸಂಪೂರ್ಣವಾಗಿ ಗಿರಿ ಪ್ರದೇಶದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಪ್ರವಾಸಿಗರು ಟ್ರಾಫಿಕ್ ಮಧ್ಯೆ ಸಿಲುಕಿಕೊಂಡು ಎಂಜಾಯ್ ಮಾಡಲೂ ಆಗದೆ ಪರದಾಡಿದ್ದಾರೆ.
ಇಲ್ಲಿ ಸೂಕ್ತವಾದ ಪಾರ್ಕಿಂಗ್ ವ್ಯವಸ್ಥೆ ಇಲ್ಲದ ಕಾರಣ ಈ ರೀತಿಯ ಸಮಸ್ಯೆ ಉಂಟಾಗಿದೆ. ಅಲ್ಲದೇ ರಾಜ್ಯ ಮತ್ತು ಹೊರ ರಾಜ್ಯಗಳಿಂದಲೂ ಪ್ರವಾಸಿಗರು ಇಲ್ಲಿಗೆ ಆಗಮಿಸಿದ್ದಾರೆ. ಸರಿಯಾದ ವ್ಯವಸ್ಥೆ ಕಲ್ಪಿಸದೇ ಈ ರೀತಿಯಾಗಿದೆ ಎಂದು ಪ್ರವಾಸಿಗರು ಆರೋಪಿಸಿದ್ದಾರೆ. ಅಲ್ಲದೇ ಪಾರ್ಕಿಂಗ್ ಜಾಗಕ್ಕೆ ಹೆಚ್ಚುವರಿ ಶುಲ್ಕ ವಸೂಲಿ ಮಾಡುತ್ತಿರುವುದು ಕಂಡು ಬಂದಿದೆ.