ಕರ್ನಾಟಕ

karnataka

ETV Bharat / state

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಜೀವರಾಜ್ ವಿರುದ್ಧ ಜಾಮೀನುರಹಿತ​ ವಾರಂಟ್

ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಡಿ.ಎನ್. ಜೀವರಾಜ್ ವಿರುದ್ಧ ನ್ಯಾಯಾಲಯದಿಂದ ಜಾಮೀನು ರಹಿತ ವಾರಂಟ್ ಜಾರಿಯಾಗಿದೆ.

non-bailable-warrant-against-cm-political-secretary-jeevaraj
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಜೀವರಾಜ್​ ವಿರುದ್ಧ ವಾರಂಟ್ ಜಾರಿ

By

Published : Jun 18, 2022, 8:35 PM IST

ಚಿಕ್ಕಮಗಳೂರು:ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಡಿ.ಎನ್. ಜೀವರಾಜ್ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ. ಜಿಲ್ಲೆಯ ಎನ್​.ಆರ್. ಪುರ ನ್ಯಾಯಾಲಯದಿಂದ ಜಾಮೀನು ರಹಿತ ವಾರಂಟ್ ಜಾರಿಯಾಗಿದೆ.

2020ರಿಂದ ಎನ್​.ಆರ್. ಪುರ ನ್ಯಾಯಾಲಯಕ್ಕೆ ಗೈರಾದ ಹಿನ್ನೆಲೆಯಲ್ಲಿ ವಾರಂಟ್ ಜಾರಿ ಮಾಡಲಾಗಿದೆ. ಹಣದ ಬೇಡಿಕೆ, ಬ್ಲ್ಯಾಕ್​ಮೇಲ್​ ಮಾಡಿದ್ದಾರೆ ಎಂದು ಮಾಜಿ ಸಚಿವ ಜೀವರಾಜ್ ಅವರು ವ್ಯಕ್ತಿಯೋರ್ವನ ವಿರುದ್ಧ ದೂರು ನೀಡಿದ್ದರು.

ಎನ್​.ಆರ್.ಪುರ ಪೊಲೀಸ್ ಠಾಣೆಯಲ್ಲಿ ಜೀವರಾಜ್ ದೂರು ಸಲ್ಲಿಸಿದ್ದರು. ಈ ಬಗ್ಗೆ ಎನ್ ಆರ್ ಪುರ ಪೊಲೀಸ್ ಠಾಣೆಯಿಂದ ಕೋರ್ಟ್​ಗೆ ಚಾರ್ಚ್ ಶೀಟ್ ಸಲ್ಲಿಕೆ ಮಾಡಲಾಗಿದೆ. ಆದರೆ ಚಾರ್ಜ್​ ಶೀಟ್ ಸಲ್ಲಿಕೆಯಾದ ಬಳಿಕ ಜೀವರಾಜ್ ನ್ಯಾಯಾಲಯಕ್ಕೆ ಹಾಜರಾಗುತ್ತಿಲ್ಲ. 2020ರಿಂದ ನಿರಂತರವಾಗಿ ನ್ಯಾಯಾಲಯಕ್ಕೆ ಗೈರಾದ ಕಾರಣ ವಾರಂಟ್ ಜಾರಿ ಮಾಡಲಾಗಿದೆ.

ಇದನ್ನೂ ಓದಿ:ಧೈರ್ಯಶಾಲಿ ಬಾಲೆ : ಬಲಾತ್ಕಾರಕ್ಕೆ ಯತ್ನಿಸಿದ ಕಾಮುಕನನ್ನ ಹಿಮ್ಮೆಟ್ಟಿಸಿದ ಎಂಟು ವರ್ಷದ ಬಾಲಕಿ!

For All Latest Updates

TAGGED:

ABOUT THE AUTHOR

...view details