ಚಿಕ್ಕಮಗಳೂರು:ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಜಿಲ್ಲೆಯ ಎನ್.ಆರ್. ಪುರ ತಾಲೂಕಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೈಕ್ ಚಟ್ಟದ ಮೇಲೆ ಇರಿಸಿ ಅಣುಕು ಶವಯಾತ್ರೆ ನಡೆಸಿ ಪ್ರತಿಭಟಿಸಿದರು.
ಬೈಕ್ ಚಟ್ಟಕ್ಕೇರಿಸಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ 'ಕೈ' ಪ್ರತಿಭಟನೆ - ಎನ್ಆರ್ ಪುರ ಕಾಂಗ್ರೆಸ್ ಪ್ರತಿಭಟನೆ
ಪಾದಯಾತ್ರೆಯಲ್ಲಿ ಬೈಕ್ ಚಟ್ಟದಲ್ಲಿರಿಸಿ ಶವಯಾತ್ರೆ ನಡೆಸಿದರು. ತಾಲೂಕು ಕಚೇರಿ ಆವರಣದಲ್ಲಿ ಅಡುಗೆ ಮಾಡಿ ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸಭೆಯ ಅಧ್ಯಕ್ಷತೆಯನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಟರಾಜ್ ವಹಿಸಿದ್ದರು.
![ಬೈಕ್ ಚಟ್ಟಕ್ಕೇರಿಸಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ 'ಕೈ' ಪ್ರತಿಭಟನೆ nr-pura-congress-protest-against-petrol-and-diesel-price-rise](https://etvbharatimages.akamaized.net/etvbharat/prod-images/768-512-10721791-thumbnail-3x2-bike.jpg)
ನಗರದ ಗಣಪತಿ ಪೆಂಡಾಲ್ ಪಕ್ಕದ ವೇದಿಕೆಯಲ್ಲಿ ಬ್ಲಾಕ್ ಕಾಂಗ್ರೆಸ್ ನೇತ್ರತ್ವದಲ್ಲಿ ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ, ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು. ತಾಲೂಕು ಕಚೇರಿಯಿಂದ ಪಟ್ಟಣದ ವಾಟರ್ ಟ್ಯಾಂಕ್ ವೃತ್ತದವರೆಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನಾಕಾರು ಪಾದಯಾತ್ರೆ ನಡೆಸಿದರು.
ಪಾದಯಾತ್ರೆಯಲ್ಲಿ ಬೈಕ್ ಚಟ್ಟದಲ್ಲಿರಿಸಿ ಶವಯಾತ್ರೆ ನಡೆಸಿದರು. ತಾಲೂಕು ಕಚೇರಿ ಆವರಣದಲ್ಲಿ ಅಡುಗೆ ಮಾಡಿ ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸಭೆಯ ಅಧ್ಯಕ್ಷತೆಯನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಟರಾಜ್ ವಹಿಸಿದ್ದರು. ಈ ಪ್ರತಿಭಟನೆಯಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.