ಕರ್ನಾಟಕ

karnataka

ETV Bharat / state

ಚಿಕ್ಕಮಗಳೂರಿನಲ್ಲಿ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರಗತಿ ಪರಿಶೀಲನಾ ಸಭೆ - ಜಿಲ್ಲಾ ಉಸ್ತುವಾರಿ ಸಚಿವ ಸಿ ಟಿ ರವಿ ನೇತೃತ್ವದಲ್ಲಿ ಅಧಿಕಾರಿಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ

ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಎರಡನೇ ದಿನವೂ ಅಧಿಕಾರಿಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಮುಂದುವರೆದಿದ್ದು, ಈ ಸಭೆಯಲ್ಲಿ ವಿಶೇಷವಾಗಿ ಕುಡಿಯುವ ನೀರಿನ ಬಗ್ಗೆ ಚರ್ಚಿಸಲಾಯಿತು.

Officers quarterly progress review meeting
ಎರಡನೇ ದಿನ ಜರುಗಿದ ಅಧಿಕಾರಿಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ

By

Published : Dec 25, 2019, 9:32 AM IST

ಚಿಕ್ಕಮಗಳೂರು: ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ನೇತೃತ್ವದಲ್ಲಿ ಎರಡನೇ ದಿನವೂ ಅಧಿಕಾರಿಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಈ ಸಭೆಯಲ್ಲಿ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಭಾಗವಹಿಸಿದ್ದು, ವಿಶೇಷವಾಗಿ ಕುಡಿಯುವ ನೀರಿನ ಬಗ್ಗೆ ಚರ್ಚೆ ನಡೆಸಲಾಯಿತು. ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ, ಅರಣ್ಯ ಇಲಾಖೆ, ಆನೆ ದಾಳಿಗೆ ಕಾರ್ಮಿಕರು ಹಾಗೂ ಸಾರ್ವಜನಿಕರು ಸಾವನ್ನಪ್ಪುತ್ತಿರುವ ಕುರಿತು ಚರ್ಚೆ ನಡೆಸಿದ್ದು, ಇದರ ಜೊತೆಗೆ ಅಬಕಾರಿ ಇಲಾಖೆ, ಆರೋಗ್ಯ ಇಲಾಖೆ, ಆಯುಷ್ ಇಲಾಖೆ, ಅರಣ್ಯ ಹಕ್ಕು ಕಾಯ್ದೆ ಬ ನಡೆಸಿಗ್ಗೆ ಚರ್ಚೆ ಅಭಿವೃದ್ದಿ ಬಗ್ಗೆ ಮಾಹಿತಿ ಪಡೆಯಲಾಯಿತು.

ಎರಡನೇ ದಿನ ಜರುಗಿದ ಅಧಿಕಾರಿಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ

ಈ ಸಂದರ್ಭದಲ್ಲಿ ಸರಿಯಾಗಿ ಕೆಲಸ ಮಾಡದ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಉಸ್ತುವಾರಿ ಸಚಿವ ಸಿ.ಟಿ.ರವಿ, ಪ್ರಮುಖವಾಗಿ ಅಲ್ಪಸಂಖ್ಯಾತರ ವಿಭಾಗದ ಅಧಿಕಾರಿ, ಜನಪ್ರತಿನಿಧಿಗಳಿಗೆ ಸರಿಯಾಗಿ ಮಾಹಿತಿ ನೀಡುತ್ತಿಲ್ಲ ಎಂಬ ಆರೋಪದ ಬಗ್ಗೆ ಮಾಹಿತಿ ಪಡೆದರು.

ಎರಡನೇ ದಿನದ ಸಭೆಯಲ್ಲಿ ಉಪ ಸಭಾಪತಿ ಎಸ್.ಎಲ್.ಧರ್ಮೇಗೌಡ, ಕಡೂರು ಶಾಸಕ ಬೆಳ್ಳಿ ಪ್ರಕಾಶ್, ತರೀಕೆರೆ ಶಾಸಕ ಡಿ.ಎಸ್.ಸುರೇಶ್, ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ ಗೈರಾಗಿದ್ದರು.

For All Latest Updates

TAGGED:

ABOUT THE AUTHOR

...view details