ಚಿಕ್ಕಮಗಳೂರು:ಜಿಲ್ಲೆಯಲ್ಲಿಂದು ಒಂದೇ ಒಂದು ಕೊರೊನಾ ವೈರಸ್ ಪ್ರಕರಣ ಪತ್ತೆಯಾಗಿಲ್ಲ. ಹೀಗಾಗಿ ಜಿಲ್ಲೆಯ ಜನರು ನಿಟ್ಟುಸಿರು ಬಿಡುವಂತಾಗಿದೆ.
ಚಿಕ್ಕಮಗಳೂರಿನಲ್ಲಿಂದು ಶೂನ್ಯ ಪ್ರಕರಣ.. ಓರ್ವ ಸೋಂಕಿತ ಸಾವು! - Chikkamagaluru Market Road
ಚಿಕ್ಕಮಗಳೂರು ನಗರದ ಮಾರ್ಕೆಟ್ ರಸ್ತೆಯ 62 ವರ್ಷದ ಕೊರೊನಾ ಸೋಂಕಿತ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿಂದು ಒಂದೇ ಒಂದು ಕೊರೊನಾ ವೈರಸ್ ಪ್ರಕರಣ ಪತ್ತೆಯಾಗಿಲ್ಲ.
ಚಿಕ್ಕಮಗಳೂರು ಜಿಲ್ಲೆಯಲ್ಲಿಂದು ಶೂನ್ಯ ಪ್ರಕರಣ..ಓರ್ವ ಸೋಂಕಿತ ಸಾವು
ಇಂದು ಜಿಲ್ಲಾ ಕೋವಿಡ್-19 ಆಸ್ಪತ್ರೆಯಿಂದ 13 ಮಂದಿ ಸೋಂಕಿತರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಅಲ್ಲದೆ, ನಗರದ ಮಾರ್ಕೆಟ್ ರಸ್ತೆಯ 62 ವರ್ಷದ ಕೊರೊನಾ ಸೋಂಕಿತ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ಈವರೆಗೂ ಮೂವರು ಸೋಂಕಿಗೆ ಬಲಿಯಾಗಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 129ಕ್ಕೆ ಏರಿಕೆಯಾಗಿದ್ದು, 46 ಸಕ್ರಿಯ ಪ್ರಕರಣಗಳಿವೆ.