ಕರ್ನಾಟಕ

karnataka

ETV Bharat / state

ಕಾಫಿನಾಡಲ್ಲಿ ಮತ್ತೊಂದು ಕೊರೊನಾ ಪ್ರಕರಣ ಪತ್ತೆ... ಶೇ.50ರಷ್ಟು ಗುಣಮುಖ - ಚಿಕ್ಕಮಗಳೂರಿನಲ್ಲಿ ಕೊರೊನಾ ಪ್ರಕರಣ ಪತ್ತೆ,

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಗುರುವಾರ ಮತ್ತೊಂದು ಕೋವಿಡ್​ 19 ಪ್ರಕರಣ ಪತ್ತೆಯಾಗಿದ್ದು, ಜನ ಭಯಭೀತಗೊಂಡಿದ್ದಾರೆ.

corona case found, corona case found in Chikkamagaluru, Chikkamagaluru corona case news, ಕೊರೊನಾ ಪ್ರಕರಣ ಪತ್ತೆ, ಚಿಕ್ಕಮಗಳೂರಿನಲ್ಲಿ ಕೊರೊನಾ ಪ್ರಕರಣ ಪತ್ತೆ, ಚಿಕ್ಕಮಗಳುರು ಕೊರೊನಾ ಸುದ್ದಿ,
ಕಾಫಿನಾಡಲ್ಲಿ ಮತ್ತೊಂದು ಕೊರೊನಾ ಪ್ರಕರಣ ಪತ್ತೆ

By

Published : Jul 2, 2020, 7:45 PM IST

ಚಿಕ್ಕಮಗಳೂರು :ಜಿಲ್ಲೆಯಲ್ಲಿ ಇಂದು ಮತ್ತೊಂದ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 82 ಕ್ಕೆ ಏರಿಕೆಯಾಗಿದೆ.

ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ ಇಂದು ವ್ಯಕ್ತಿಯೊಬ್ಬಗುಣಮುಖರಾಗಿ ಬಿಡುಗಡೆಯಾಗಿದ್ದು, ಒಟ್ಟು 42 ಜನ ಸೋಂಕಿನಿಂದ ಮುಕ್ತರಾಗಿದ್ದಾರೆ. ಇನ್ನು ಜಿಲ್ಲೆಯಲ್ಲಿ ಇಲ್ಲಿಯವರೆಗೆ ಓರ್ವ ವೃದ್ಧೆ ಸಾವನ್ನಪ್ಪಿದ್ದಾರೆ.

ಕಾಫಿನಾಡಲ್ಲಿ ಮತ್ತೊಂದು ಕೊರೊನಾ ಪ್ರಕರಣ ಪತ್ತೆ

ಇಂದು ಕಡೂರು ತಾಲೂಕಿನ ನಿವಾಸಿಗೆ ಕೊರೊನಾ ದೃಢಪಟ್ಟ ಹಿನ್ನೆಲೆ ಆತ ವಾಸಿಸುತ್ತಿದ್ದ ನಗರವನ್ನು ಪೊಲೀಸರು ಹಾಗೂ ಆರೋಗ್ಯ ಇಲಾಖೆ ಸೀಲ್ ಡೌನ್ ಮಾಡಿ, ಕಟ್ಟೆಚ್ಚರ ವಹಿಸಿದೆ.

ಸೋಂಕಿತ ವ್ಯಕ್ತಿಯ ಜೊತೆ ಪ್ರಾರ್ಥಮಿಕ ಹಾಗೂ ದ್ವಿತೀಯ ಸಂಪರ್ಕ ಹೊಂದಿದ್ದ ಜನರನ್ನು ಪತ್ತೆ ಹಚ್ಚುವ ಕಾರ್ಯ ಜಿಲ್ಲಾ ಆರೋಗ್ಯ ಇಲಾಖೆ ಮಾಡುತ್ತಿದೆ.ಕೊರೊನಾ ಸೋಂಕಿತನನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 82 ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು 40 ಸಕ್ರಿಯ ಪ್ರಕರಣಗಳಿವೆ.

ABOUT THE AUTHOR

...view details