ಚಿಕ್ಕಮಗಳೂರು: ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಚಿಕ್ಕಮಗಳೂರು ನಗರದ ನಿವಾಸಿಯಾದ 72 ವರ್ಷದ ವೃದ್ಧ ಕೊರೊನಾ ಸೋಂಕು ತಗುಲಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಚಿಕ್ಕಮಗಳೂರಲ್ಲಿ ಕೊರೊನಾಗೆ ಮತ್ತೊಂದು ಬಲಿ: ಸಾವಿನ ಸಂಖ್ಯೆ 9ಕ್ಕೆ ಏರಿಕೆ - ಕೊರೊನಾ ಸೋಂಕಿಗೆ ವ್ಯಕ್ತಿ ಬಲಿ
ಮೃತ ವ್ಯಕ್ತಿ ನಗರಸಭೆಯ ಮಾಜಿ ಅಧ್ಯಕ್ಷರಾಗಿದ್ದು, ತೀವ್ರ ಉಸಿರಾಟದ ತೊಂದರೆ, ಬಿಪಿ, ಕಾಯಿಲೆಯಿಂದ ಬಳಲುತ್ತಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ.
ಇವರು ತೀವ್ರ ಉಸಿರಾಟದ ತೊಂದರೆ, ಬಿಪಿ, ಕಾಯಿಲೆಯಿಂದ ಬಳಲುತ್ತಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು ನಗರದ ಅಂಡೇ ಛತ್ರದ ನಿವಾಸಿಯಾಗಿದ್ದು, ನಗರಸಭೆಯ ಮಾಜಿ ಅಧ್ಯಕ್ಷರಾಗಿದ್ದರು.
ಒಟ್ಟು ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಈವರೆಗೂ 9 ಜನರು ಸಾವನ್ನಪ್ಪಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಅಜ್ಜಂಪುರದಲ್ಲಿ ಓರ್ವ ವಯೋವೃದ್ಧೆ, ಚಿಕ್ಕಮಗಳೂರು ನಗರದ ಮಾರ್ಕೆಟ್ ರಸ್ತೆಯಲ್ಲಿ ಓರ್ವ ವ್ಯಕ್ತಿ ಹಾಗೂ ಉಪ್ಪಳ್ಳಿ ಯಲ್ಲಿ ಓರ್ವ ಮಹಿಳೆ ಹಾಗೂ ಪುರುಷ, ನಗರದ ರಾಮನ ಹಳ್ಳಿಯಲ್ಲಿ ಓರ್ವ ವಯೋವೃದ್ಧೆ, ನಗರದ ಗೌರಿ ಕಾಲುವೆಯಲ್ಲಿ 52 ವರುಷ ಪುರುಷ ಸೋಂಕಿಗೆ ಬಲಿಯಾಗಿದ್ದರು. ಚಿಕ್ಕಮಗಳೂರು ನಗರದಲ್ಲಿಯೇ ಒಟ್ಟು 7 ಜನರು ಸಾವನ್ನಪ್ಪಿದ್ದು, ತರೀಕೆರೆ ತಾಲೂಕಿನ ಅಜ್ಜಂಪುರದಲ್ಲಿ ಒಬ್ಬರು, ಕೊಪ್ಪ ತಾಲೂಕಿನಲ್ಲಿ ಓರ್ವ ವಯೋವೃದ್ಧೆ ಸೋಂಕಿಗೆ ಬಲಿಯಾಗಿದ್ದಾರೆ. ಇಂದು ನಗರಲ್ಲಿಯೇ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಒಟ್ಟು ಈವರೆಗೂ 9 ಜನರು ಈ ಸೋಂಕಿಗೆ ಸಾವನ್ನಪ್ಪಿದ್ದಾರೆ.