ಕರ್ನಾಟಕ

karnataka

ETV Bharat / state

ಕಾಫಿ ನಾಡಿನಲ್ಲಿ ಕೊರೊನಾರ್ಭಟ: ಮಹಾಮಾರಿಗೆ 52 ವರ್ಷದ ವ್ಯಕ್ತಿ ಬಲಿ

ಚಿಕ್ಕಮಗಳೂರಿನ ಗೌರಿ ಕಾಲುವೆಯ 52 ವರ್ಷದ ವ್ಯಕ್ತಿ ಕೊರೊನಾ ಸೋಂಕು ತಗುಲಿ ಮೃತಪಟ್ಟಿದ್ದಾರೆ. ಜಿಲ್ಲಾ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು, ತೀವ್ರ ಉಸಿರಾಟದ ಸಮಸ್ಯೆ ಹಾಗು ಅಸ್ತಮಾದಿಂದ ಬಳಲುತ್ತಿದ್ದರು.

chikkamagalur
ಕಾಫಿ ನಾಡಿನಲ್ಲಿ ಕೊರೊನಾರ್ಭಟ

By

Published : Jul 14, 2020, 5:33 PM IST

ಚಿಕ್ಕಮಗಳೂರು: ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿತ ವ್ಯಕ್ತಿಯೋರ್ವ ಸಾವನ್ನಪ್ಪಿದ್ದು, ಈ ಮೂಲಕ ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದವರ ಸಂಖೈ 6 ಕ್ಕೆ ಏರಿಕೆಯಾಗಿದೆ.

ನಗರದ ಗೌರಿ ಕಾಲುವೆ ನಿವಾಸಿ 52 ವರ್ಷದ ಪುರುಷನಿಗೆ ಕೊರೊನಾ ಸೋಂಕು ತಗುಲಿ ಜಿಲ್ಲಾ ಕೋವೀಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತೀವ್ರ ಉಸಿರಾಟದ ಸಮಸ್ಯೆ ಹಾಗು ಅಸ್ತಮಾ ಕಾಯಿಲೆಯಿಂದ ಬಳಲುತ್ತಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಚಿಕ್ಕಮಗಳೂರು ನಗರದಲ್ಲಿಯೇ ಒಟ್ಟು ಐವರು ಮೃತಪಟ್ಟಿದ್ದು, ತರೀಕೆರೆ ತಾಲೂಕಿನ ಅಜ್ಜಂಪುರದಲ್ಲಿ ಒಬ್ಬರು ಸೋಂಕಿಗೆ ಬಲಿಯಾಗಿದ್ದಾರೆ.

ABOUT THE AUTHOR

...view details