ಕರ್ನಾಟಕ

karnataka

ETV Bharat / state

ಚಿಕ್ಕಮಗಳೂರು: 33 ಸೋಂಕಿತರ ಪೈಕಿ 18 ಮಂದಿ ಗುಣಮುಖ - ಚಿಕ್ಕಮಗಳೂರು ಕೊರೊನಾ ಕೇಸ್

ತಾಲೂಕಿನ 32 ವರ್ಷದ ವ್ಯಕ್ತಿಯಲ್ಲಿ ಸೋಂಕು ಪತ್ತೆಯಾಗಿದ್ದು,ಒಟ್ಟು ಸೋಂಕಿತರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ. ಅವರಲ್ಲಿ18 ಮಂದಿ ಗುಣಮುಖರಾಗಿ ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

Chickmagaluru corona case
Chickmagaluru corona case

By

Published : Jun 21, 2020, 7:28 PM IST

ಚಿಕ್ಕಮಗಳೂರು:ಜಿಲ್ಲೆಯಲ್ಲಿ ಇಂದು ಒಂದು ಕೊರೊನಾ ಸೋಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ.

ತಾಲೂಕಿನ 32 ವರ್ಷದ ವ್ಯಕ್ತಿಯಲ್ಲಿ ಸೋಂಕು ಪತ್ತೆಯಾಗಿದ್ದು, ಸೋಂಕು ಹೇಗೆ ತಗುಲಿದೆ ಎಂಬುದರ ಬಗ್ಗೆ ಈವರೆಗೆ ತಿಳಿದುಬಂದಿಲ್ಲ. ಸದ್ಯ ಈತನನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

ಸೋಂಕಿತ ವಾಸ ಮಾಡುತ್ತಿದ್ದ ಏರಿಯಾವನ್ನು ಪೊಲೀಸ್ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಸೀಲ್ ಡೌನ್ ಮಾಡಿದ್ದು, ಕಟ್ಟೆಚ್ಚರ ವಹಿಸಿದೆ. ಇನ್ನೂ ಜಿಲ್ಲಾ ಆರೋಗ್ಯ ಇಲಾಖೆಯು ಸೋಂಕಿತನ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತ ಜನರನ್ನು ಪತ್ತೆ ಹಚ್ಚುವ ಕಾರ್ಯ ಪ್ರಾರಂಭಿಸಿದೆ.

ಜಿಲ್ಲೆಯಲ್ಲಿ ಒಟ್ಟು 33 ಸೋಂಕಿತರ ಪೈಕಿ 18 ಮಂದಿ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣ ಮುಖರಾಗಿ ಮನೆ ಸೇರಿದ್ದಾರೆ.

ABOUT THE AUTHOR

...view details