ಕರ್ನಾಟಕ

karnataka

ETV Bharat / state

ಚಿಕ್ಕಮಗಳೂರಿನಲ್ಲಿಂದು ಓರ್ವನಲ್ಲಿ ಸೋಂಕು ಪತ್ತೆ...23 ಮಂದಿ ಗುಣಮುಖ - ಚಿಕ್ಕಮಗಳೂರು ಲೆಟೆಸ್ಟ್ ನ್ಯೂಸ್

ಇಂದು 28 ವರ್ಷದ ಪುರುಷನಲ್ಲಿ ಸೋಂಕು ಪತ್ತೆಯಾಗಿದ್ದು, ಇವರು ಬೆಂಗಳೂರಿನಿಂದ ಬಂದವರಾಗಿದ್ದಾರೆ. ಸೋಂಕಿತರ ಸಂಖ್ಯೆ 43ಕ್ಕೆ ಏರಿಕೆಯಾಗಿದ್ದು, 23 ಮಂದಿ ಗುಣಮುಖರಾಗಿದ್ದಾರೆ.

Chickmagaluru corona case
Chickmagaluru corona case

By

Published : Jun 24, 2020, 9:54 PM IST

ಚಿಕ್ಕಮಗಳೂರು: ಜಿಲ್ಲೆಯಲ್ಲಿಂದು 1 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 43ಕ್ಕೆ ಏರಿಕೆಯಾಗಿದೆ.

ಈಗಾಗಲೇ 23 ಜನ ಸೋಂಕಿತರು, ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣ ಮುಖರಾಗಿ ಬಿಡುಗಡೆಯಾಗಿದ್ದಾರೆ. ಓರ್ವ ವಯೋವೃದ್ಧೆ ಸಾವನ್ನಪ್ಪಿದ್ದಾರೆ.

ಇಂದು 28 ವರ್ಷದ ಪುರುಷನಲ್ಲಿ ಸೋಂಕು ಪತ್ತೆಯಾಗಿದ್ದು, ಬೆಂಗಳೂರಿನಿಂದ ಬಂದವರಾಗಿದ್ದಾರೆ. ಈ ಸೋಂಕಿತ ವ್ಯಕ್ತಿ ವಾಸ ಮಾಡುತ್ತಿದ್ದ ಏರಿಯಾವನ್ನು ಪೊಲೀಸರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಸೀಲ್ ಡೌನ್ ಮಾಡಿ, ಕಟ್ಟೆಚ್ಚರ ವಹಿಸಿದ್ದಾರೆ.

ಜಿಲ್ಲಾ ಆರೋಗ್ಯ ಇಲಾಖೆ ಈ ವ್ಯಕ್ತಿಯ ಜೊತೆ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕ ಹೊಂದಿದ್ದ ಜನರನ್ನು ಹುಡುಕುವ ಕಾರ್ಯ ಪ್ರಾರಂಭ ಮಾಡಿದ್ದು, ಇವರನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ABOUT THE AUTHOR

...view details