ಕರ್ನಾಟಕ

karnataka

ಮೈದುಂಬಿ ಹರಿಯುತ್ತಿರುವ ಭದ್ರಾ ನದಿ: ಮುಳುಗಡೆಯಾದ ಹೆಬ್ಬಾಳೆ ಸೇತುವೆ

By

Published : Jul 4, 2022, 3:12 PM IST

ಕಾಫಿನಾಡು ಚಿಕ್ಕಮಗಳೂರಿನಲ್ಲಿ ವರುಣನ ಆರ್ಭಟ ಜೋರಾಗಿದೆ. ಭದ್ರಾ ನದಿ ಮೈದುಂಬಿ ಹರಿಯುತ್ತಿರುವ ಹಿನ್ನೆಲೆ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದೆ.

Hebbale Bridge drowned in water
ಮುಳುಗಡೆಯಾದ ಹೆಬ್ಬಾಳೆ ಸೇತುವೆ

ಚಿಕ್ಕಮಗಳೂರು:ಜಿಲ್ಲೆಯಲ್ಲಿ ಕಳೆದ ಆರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಭದ್ರಾ ನದಿ ಅಪಾಯದ ಮಟ್ಟ ಮೀರಿ ‌ಹರಿಯುತ್ತಿದೆ. ಚಿಕ್ಕಮಗಳೂರು ಸೇರಿದಂತೆ ಮಲೆನಾಡು ಭಾಗ ಹಾಗೂ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಉತ್ತಮ ಮಳೆಯಾಗುತ್ತಿದೆ. ಭದ್ರಾ ನದಿ ಮೈದುಂಬಿ ಹರಿಯುತ್ತಿರುವ ಹಿನ್ನೆಲೆ ಕಳಸದ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದೆ.

ಕಳಸದ ಹೆಬ್ಬಾಳೆ ಸೇತುವೆ ಮುಳುಗಡೆ

ಈ ವರ್ಷ ಮೊದಲ ಬಾರಿಗೆ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದ್ದು, ಪ್ರವಾಹ ಸನ್ನಿವೇಶ ಸೃಷ್ಟಿಯಾಗಿದೆ. ಇದರಿಂದ ಕಳಸ - ಹೊರನಾಡು ಸಂಪರ್ಕ ಕಡಿತವಾಗಿದೆ. ಕುದುರೆ ಮುಖ, ಶೃಂಗೇರಿ, ಕೊಪ್ಪ ಸುತ್ತ ಮುತ್ತ ಧಾರಾಕಾರ ಮಳೆ ಆಗುತ್ತಿರುವ ಪರಿಣಾಮ ನದಿಗಳ ಹರಿವಿನ ಮಟ್ಟದಲ್ಲಿಯೂ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಈ ಭಾಗದಲ್ಲಿ ವಾಹನ ಸಂಚಾರದಲ್ಲಿ ಸಂಪೂರ್ಣ ಅಡಚಣೆ ಉಂಟಾಗಿದೆ.

ಇದನ್ನೂ ಓದಿ:ದಕ್ಷಿಣಕನ್ನಡದಲ್ಲಿ ವರುಣನ ಅಬ್ಬರ: ಬೆಳ್ತಂಗಡಿ ತಾಲೂಕಿನ ಶಾಲಾ, ಕಾಲೇಜುಗಳಿಗೆ ರಜೆ

ABOUT THE AUTHOR

...view details