ಚಿಕ್ಕಮಗಳೂರು:ಪಿಕಪ್ ವಾಹನವೊಂದು ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿದ್ದ ಕಬ್ಬಿಣದ ವಿಭಜಕದೊಳಗೆ ನುಗ್ಗಿದ ಪರಿಣಾಮ ವಾಹನ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗೇಟ್ ಬಳಿ ನಡೆದಿದೆ.
ನಿಯಂತ್ರಣ ತಪ್ಪಿ ಡಿವೈಡರ್ ಗೇಟ್ಗೆ ನುಗ್ಗಿದ ಪಿಕಪ್ ವಾಹನ: ಚಾಲಕ ಸ್ಥಳದಲ್ಲೇ ಸಾವು - ತರೀಕೆರೆ ತಾಲೂಕಿನ ಕುಡ್ಲೂರು
ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗೇಟ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿದ್ದ ಡಿವೈಡರ್ ಗೇಟೋಳಗೆ ನುಗ್ಗಿದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
road accident
ಮಹಮ್ಮದ್ ಆಲಿ (22) ಮೃತ ಚಾಲಕ. ರಸ್ತೆಯಲ್ಲಿ ಹೋಗುತ್ತಿದ್ದ ಪಿಕಪ್ ವಾಹನ ನಿಯಂತ್ರಣ ತಪ್ಪಿ ರಸ್ತೆ ವಿಭಜಕ(ಡಿವೈಡರ್ ಗೇಟ್)ದೊಳಗೆನುಗ್ಗಿದ ಪರಿಣಾಮ ಈ ದುರಂತ ಸಂಭವಿಸಿದೆ. ಇನ್ನು ಘಟನೆಯಲ್ಲಿ ಮತ್ತೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ತರೀಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಬೀರೂರು ಪೊಲೀಸರು ಭೇಟಿ ನೀಡಿ, ಪರಿಶೀಲನೆ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.