ಚಿಕ್ಕಮಗಳೂರು:ಕಳೆದ ಒಂದು ವರ್ಷದಿಂದ ನಗರ ಮತ್ತು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಗಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ನಗರ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸರಗಳ್ಳತನ ಪ್ರಕರಣ: ಚಿಕ್ಕಮಗಳೂರು ಪೊಲೀಸರಿಂದ ಇಬ್ಬರು ಆರೋಪಿಗಳ ಬಂಧನ
ಕಳೆದ ಒಂದು ವರ್ಷದಿಂದ ಮಹಿಳೆಯರನ್ನು ಗುರಿಯಾಗಿಸಿಕೊಂಡು ಸರಗಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಚಿಕ್ಕಮಗಳೂರು ಪೊಲೀಸರು ಬಂಧಿಸಿದ್ದು, ಬಂಧಿತರಿಂದ ಒಟ್ಟು 2.15 ಲಕ್ಷ ರೂ. ಮೌಲ್ಯದ 72 ಗ್ರಾಂ ಚಿನ್ನಾಭರಣ ಮತ್ತು ಎರಡು ಬೈಕ್ಗಳನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಷರೀಫ್ಗಲ್ಲಿ ನಿವಾಸಿ ಮಹಮ್ಮದ್ ಅಲಿ, ಬೇಲೂರು ಹಗರೆ ನಿವಾಸಿ ಪವನ್ ಬಂಧಿತ ಆರೋಪಿಗಳು. ಇವರ ಮೇಲೆ ನಗರ ಠಾಣೆಯಲ್ಲಿ 5 ಪ್ರಕರಣಗಳು, ಗ್ರಾಮಾಂತರ ಠಾಣೆಯಲ್ಲಿ 5 ಮತ್ತು ಬಸವನಹಳ್ಳಿ ಠಾಣೆಯಲ್ಲಿ ಒಂದು ಪ್ರಕರಣ ಸೇರಿದಂತೆ ಒಟ್ಟು 11 ಪ್ರಕರಣಗಳಲ್ಲಿ ಈ ಆರೋಪಿಗಳು ಪೊಲೀಸರಿಗೆ ಸಿಗದೆ ಚಳ್ಳೆಹಣ್ಣು ತಿನ್ನಿಸುತ್ತಿದ್ದರು. ಕೊನೆಗೂ ಈ ಆರೋಪಿಗಳನ್ನು ಪೊಲೀಸರು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ಇವರು ಜನ ಕಡಿಮೆ ಇರುವ ಪ್ರದೇಶಗಳಲ್ಲಿ ಸಂಚರಿಸುತ್ತಿದ್ದ ಮಹಿಳೆಯರನ್ನು ಗುರಿಯಾಗಿಸಿಕೊಂಡು ಸರಗಳ್ಳತನ ಮಾಡುತ್ತಿದ್ದರು. ಬಂಧಿತರಿಂದ ಒಟ್ಟು 2.15 ಲಕ್ಷ ರೂ. ಮೌಲ್ಯದ 72 ಗ್ರಾಂ ಚಿನ್ನಾಭರಣ ಮತ್ತು ಎರಡು ಬೈಕ್ಗಳನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇನ್ನೂ 7 ಜನ ಆರೋಪಿಗಳು ತಲೆಮರೆಸಿಕೊಂಡಿದ್ದು, ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.