ಚಿಕ್ಕಮಗಳೂರು: ಆಸ್ಪತ್ರೆಯಿಂದ ಎಸ್ಕೇಪ್ ಆಗಿದ್ದ ಗಾಂಜಾ ಪ್ರಕರಣದ ವಿಚಾರಣಾಧೀನ ಕೈದಿಯನ್ನು ಚಿಕ್ಕಮಗಳೂರು ಪೊಲೀಸರು ಮತ್ತೆ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಗ್ಯ ಸಮಸ್ಯೆ ಕಾರಣ ಚಿಕ್ಕಮಗಳೂರಿನ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕೈದಿ ಶೌಚಾಲಯಕ್ಕೆ ಹೋಗುವ ನೇಪ ಹೇಳಿ ಆಸ್ಪತ್ರೆಯಿಂದ ಕಾಲ್ಕಿತ್ತಿದ್ದ.
ಹಸುಗಳು ಸಜೀವ ದಹನ:ದನದ ಕೊಟ್ಟಿಗೆಗೆ ಬೆಂಕಿ ತಗುಲಿ ಎರಡು ಹಸುಗಳು ಸಜೀವ ದಹನವಾಗಿರುವ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಹಿರೇಕೊಡಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಿವಪುರದಲ್ಲಿ ನಡೆದಿದೆ. ಗ್ರಾಮದ ನಾಗೇಶ್ ಎಂಬುವವರ ಮನೆಯ ಹಿಂಬದಿಯಲ್ಲಿರುವ ಕೊಟ್ಟಿಗೆಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೆಂಕಿ ತಗುಲಿದೆ.