ಚಿಕ್ಕಮಗಳೂರು :ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಪೇದೆಯೊರ್ವರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಹೃದಯಾಘಾತದಿಂದ ಕರ್ತವ್ಯ ನಿರತ ಪೇದೆ ಸಾವು - undefined
ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ರ್ತವ್ಯ ನಿರ್ವಹಿಸುತ್ತಿದ್ದ ಪೇದೆಯೊರ್ವರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.
ಯೋಗೀಶ್(30) ಮೃತ ಪೇದೆ. ಇವರು ಮಲ್ಲಂದೂರು ನಿವಾಸಿಯಾಗಿದ್ದಾರೆ. ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ರ್ತವ್ಯ ನಿರ್ವಹಿಸುತ್ತಿದ್ದರು. ಈ ವೇಳೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಠಾಣಾ ಸಿಬ್ಬಂದಿಗಳು ಯೋಗೀಶ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಸ್ಥಳಕ್ಕೆ ಎಸ್ಪಿ ಹರೀಶ್ ಪಾಂಡೆ ಭೇಟಿ ನೀಡಿದ್ದು, ಬಾಳೆಹೊನ್ನೂರು ಸರ್ಕಾರಿ ಆಸ್ಪತ್ರೆಯಲ್ಲಿ ಮೃತದೇಹ ಇರಿಸಲಾಗಿದೆ. ಪೋಸ್ಟ್ ಮಾರ್ಟಮ್ ನಂತರವೇ ಸತ್ಯ ಸತ್ಯತೆ ಹೊರ ಬೀಳಲಿದ್ದು, ಬಾಳೆಹೊನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.