ಚಿಕ್ಕಮಗಳೂರು: ಗಾಂಜಾ ಮಾರುತ್ತಿದ್ದ ಸ್ಥಳದ ಮೇಲೆ ದಾಳಿ ನಡೆಸಿರುವ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿ ಮಾಲು ವಶಪಡಿಸಿಕೊಂಡಿದ್ದಾರೆ.
ಗಾಂಜಾ ಮಾರಾಟ: ಚಿಕ್ಕಮಗಳೂರಲ್ಲಿ ಇಬ್ಬರು ಸೆರೆ - Cannabis Sellers
ಚಿಕ್ಕಮಗಳೂರು ನಗರದ ಸರ್ಕಾರಿ ಬಸ್ ನಿಲ್ದಾಣದ ಬಳಿ ಅಕ್ರಮವಾಗಿ ಗಾಂಜಾ ಮಾರುತ್ತಿದ್ದ ಇಬ್ಬರು ಯುವಕರನ್ನು ನಗರ ಪೊಲೀಸರು ಸೆರೆ ಹಿಡಿದಿದ್ದಾರೆ.
![ಗಾಂಜಾ ಮಾರಾಟ: ಚಿಕ್ಕಮಗಳೂರಲ್ಲಿ ಇಬ್ಬರು ಸೆರೆ Cannabis Sellers](https://etvbharatimages.akamaized.net/etvbharat/prod-images/768-512-9366599-thumbnail-3x2-vicky.jpg)
ಅಕ್ರಮವಾಗಿ ಗಾಂಜಾ ಮಾರುತ್ತಿದ್ದ ಇಬ್ಬರು ಸೆರೆ
ಚಿಕ್ಕಮಗಳೂರು ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಇಬ್ಬರು ಯುವಕರು ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ನಗರ ಪೊಲೀಸರು, ಸ್ಥಳಕ್ಕೆ ದೌಡಾಯಿಸಿ ಆರೋಪಿಗಳಾದ ರಾಜ್ಕುಮಾರ್ ಹಾಗೂ ಆಲಂಖಾನ್ ಎಂಬಿಬ್ಬರನ್ನು ಬಂಧಿಸಿದ್ದಾರೆ.
ಬಂಧಿತರಿಂದ ಸುಮಾರು 50 ಸಾವಿರ ಮೌಲ್ಯದ ಎರಡು ಕೆ.ಜಿ ಗಾಂಜಾ ಸೊಪ್ಪನ್ನು ವಶಕ್ಕೆ ಪಡೆದಿರುವ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.