ಕರ್ನಾಟಕ

karnataka

ETV Bharat / state

ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ: ಓರ್ವನ ಬಂಧನ - Chikkamagalore news

ಸ್ಥಳೀಯರು ನೀಡಿದ್ದ ಖಚಿತ ಮಾಹಿತಿ ಮೇರೆಗೆ ಕೊಪ್ಪ ತಾಲೂಕಿನ ಹರಿಹರಪುರ ಪೊಲೀಸರು ದಾಳಿ ನಡೆಸಿ ಗೋಮಾಂಸ ಹಾಗೂ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಇಲ್ಲಿನ ಕಳನಾಯಕಟ್ಟೆ ಗ್ರಾಮದ ನೂರುಲ್ಲ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

police-raid-on-illegal-slaughterhouse
ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ: ಓರ್ವನ ಬಂಧನ

By

Published : Mar 17, 2021, 9:21 PM IST

ಚಿಕ್ಕಮಗಳೂರು:ಅಕ್ರಮ ಕಸಾಯಿಖಾನೆ ಮೇಲೆ ಚಿಕ್ಕಮಗಳೂರು ಪೊಲೀಸರು ದಾಳಿ ಮಾಡಿ ಕೆಜಿಗಟ್ಟಲೆ ಗೋಮಾಂಸ ವಶಕ್ಕೆ ಪಡೆದಿದ್ದಾರೆ. ಮನೆಯ ಹಿಂಭಾಗದಲ್ಲಿ ಅಕ್ರಮವಾಗಿ ಕಸಾಯಿಖಾನೆ ಮಾಡಿಕೊಂಡು ಮಾಂಸ‌ ಮಾರಾಟ ಮಾಡುತ್ತಿರುವ ಕುರಿತು ದೂರುಗಳು ಕೇಳಿ ಬಂದಿದ್ದವು.

ಸ್ಥಳೀಯರು ನೀಡಿದ್ದ ಖಚಿತ ಮಾಹಿತಿ ಮೇರೆಗೆ ಕೊಪ್ಪ ತಾಲೂಕಿನ ಹರಿಹರಪುರ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಇಲ್ಲಿನ ಕಳನಾಯಕಟ್ಟೆ ಗ್ರಾಮದ ನೂರುಲ್ಲ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಎಸ್​​​ಐ ಕೃಷ್ಣಾ ನಾಯ್ಕ್ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ದಾಳಿ ವೇಳೆ ಸುಮಾರು 20 ಕೆಜಿಗೂ ಅಧಿಕ ಗೋಮಾಂಸವನ್ನು ವಶಕ್ಕೆ ಪಡೆಯಲಾಗಿದೆ. ಈ ಕುರಿತು ಹರಿಹರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಹಾವೇರಿ: ಅಕ್ರಮವಾಗಿ ಸಂಗ್ರಹಿಸಿಟ್ಟದ್ದ ಸ್ಫೋಟಕ ವಸ್ತುಗಳು ಪತ್ತೆ

ABOUT THE AUTHOR

...view details