ಚಿಕ್ಕಮಗಳೂರು: ಹಾಸನ ಲೋಕಸಭಾ ಕ್ಷೇತ್ರಕ್ಕೆ ಸೇರುವ ಕಡೂರು ತಾಲೂಕಿಗೆ ಮೈತ್ರಿ ಪಕ್ಷದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಆಗಮಿಸಿ ಜೆಡಿಎಸ್ ಮತ್ತು ಕಾಂಗ್ರೆಸ್ ಮುಖಂಡರ ಜೊತೆ ಚರ್ಚೆ ಮಾಡಿದರು.
ಜೆಡಿಎಸ್-ಕಾಂಗ್ರೆಸ್ ಒಟ್ಟಾಗಿ ಹೋರಾಡಿ ಗೆಲ್ಲುತ್ತೀವಿ- ಪ್ರಜ್ವಲ್ ರೇವಣ್ಣ ವಿಶ್ವಾಸ - ಜೆಡಿಎಸ್
ಇಂದಿನಿಂದ ಮೈತ್ರಿ ಪಕ್ಷದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಹಾಸನ ಲೋಕಸಭಾ ಕ್ಷೇತ್ರಕ್ಕೆ ಸೇರುವ ಕಡೂರು ತಾಲೂಕಿನಲ್ಲಿ ಪ್ರಚಾರ ಪ್ರಾರಂಭಿಸಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ನವರು ಇಬ್ಬರೂ ಮೈತ್ರಿಗೆ ಬದ್ಧವಾಗಿ ಒಗ್ಗಟ್ಟಿನಿಂದ ಪ್ರಚಾರ ಪ್ರಾರಂಭಿಸಿರುವುದಾಗಿ ಪ್ರಜ್ವಲ್ ಹೇಳಿದ್ದಾರೆ.
ಮೈತ್ರಿ ಪಕ್ಷದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ
ಕಾಂಗ್ರೆಸ್ ಹಾಗೂ ಜೆಡಿಎಸ್ನವರು ಇಬ್ಬರೂ ಮೈತ್ರಿ ಬದ್ಧತೆಯನ್ನು ಒಪ್ಪಿಕೊಂಡು ಒಗ್ಗಟ್ಟಿನಿಂದ ಪ್ರಚಾರ ಪ್ರಾರಂಭಿಸಿದ್ದೇವೆ. ಇಲ್ಲಿ ನಿಮ್ಮ ಗೆಲುವಿಗಾಗಿ ನಾವು ಶ್ರಮಿಸುತ್ತೇವೆ ಎಂದು ಕಾಂಗ್ರೆಸ್ನವರು ಭರವಸೆ ನೀಡಿದ್ದಾರೆ. ಎಲ್ಲಾ ಮುಖಂಡರು ಸೇರಿ ಚುನಾವಣೆ ಪ್ರಚಾರ ಮಾಡುತ್ತೇವೆ ಎಂದರು.
ಇಂದಿನಿಂದ ಚುನಾವಣಾ ಪ್ರಚಾರ ಆರಂಭ ಮಾಡಿದ್ದು, ತಾಲೂಕಿನಲ್ಲಿ ಮೈತ್ರಿ ಪಕ್ಷದ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತೇವೆ ಎಂದು ಕಡೂರಿನಲ್ಲಿ ಪ್ರಜ್ವಲ್ ರೇವಣ್ಣ ಹೇಳಿದರು.