ಚಿಕ್ಕಮಗಳೂರು/ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪ್ರಮೋದ್ ಮದ್ವರಾಜ್ ಅವರು ಇಂದು ಚಿಕ್ಕಮಗಳೂರಿನಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮೈತ್ರಿ ಅಭ್ಯರ್ಥಿ ಪ್ರಮೋದ್ ಮದ್ವರಾಜ್ ಭರ್ಜರಿ ಪ್ರಚಾರ - ಚಿಕ್ಕಮಗಳೂರು ಲೋಕಸಭೆ ಕ್ಷೇತ್ರ
ಏಪ್ರಿಲ್ 18ರವರೆಗೆ ನನ್ನ ಜವಬ್ದಾರಿ ನಿಮ್ಮದು, ನಂತರ 5 ವರ್ಷಗಳ ಕಾಲ ನಿಮ್ಮ ಜವಾಬ್ದಾರಿ ನನ್ನದು ಎಂದು ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪ್ರಮೋದ್ ಮದ್ವರಾಜ್ ಹೇಳಿದರು.
ಪ್ರತಿ ಹಳ್ಳಿ-ಹಳ್ಳಿಗೂ ಭೇಟಿ ನೀಡಿ ಮತದಾರರಲ್ಲಿ ಮತಯಾಚನೆ ಮಾಡುತ್ತಿದ್ದು, ಲೋಕಸಭೆ ಚುನಾವಣೆಯಲ್ಲಿ ಗೆಲ್ಲಿಸುವಂತೆ ಜನರಲ್ಲಿ ಮನವಿ ಮಾಡುತ್ತಿದ್ದಾರೆ. ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿ ಕೆಲ ಕ್ಷಣಗಳ ಕಾಲ ಚುನಾವಣೆಯ ಗೆಲುವಿಗಾಗಿ ಪ್ರಾಥನೆ ಸಲ್ಲಿಸಿದರು.
ನಂತರ ದೇವಸ್ಥಾನ ಆಡಳಿತ ಮಂಡಳಿ ಸದಸ್ಯರನ್ನು ಭೇಟಿಯಾಗಿ ಕೆಲಕಾಲ ಲೋಕಸಭೆ ಚುನಾವಣೆ ಕುರಿತು ಚರ್ಚೆ ಮಾಡಿದರು. ಬಳಿಕ ಹೊರನಾಡು ಸುತ್ತ ಮುತ್ತಲಿನ ಹಳ್ಳಿಗಳಿಗೆ ಭೇಟಿ ನೀಡಿ ಮತಯಾಚನೆ ಮಾಡಿದರು. ಈ ತಿಂಗಳು 18ರ ವರೆಗೂ ನನ್ನ ಜವಾಬ್ದಾರಿ ನಿಮ್ಮ ಮೇಲಿದೆ. ನಂತರ 5 ವರ್ಷಗಳ ಕಾಲ ನಿಮ್ಮ ಜವಾಬ್ದಾರಿ ನನ್ನದು. ಜನರ ಕೈಗೆ ಸಿಗುವ ಅಭ್ಯರ್ಥಿಯನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.