ಚಿಕ್ಕಮಗಳೂರು: ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿರುವ ಗೌರಿಗದ್ದೆಯ ಅವಧೂತ ವಿನಯ್ ಗುರೂಜಿ ಅವರ ಆಶ್ರಮಕ್ಕೆ ಉಡುಪಿ - ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಅವರು ಭೇಟಿ ನೀಡಿ ಅವಧೂತ ವಿನಯ್ ಗುರೂಜಿ ಅವರ ಆಶೀರ್ವಾದ ಪಡೆದಿದ್ದಾರೆ.
ಅವಧೂತ ವಿನಯ್ ಗುರೂಜಿ ಆಶೀರ್ವಾದ ಪಡೆದ ಪ್ರಮೋದ್ ಮಧ್ವರಾಜ್ - undefined
ಉಡುಪಿ - ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಅವರು ಗೌರಿಗದ್ದೆ ಆಶ್ರಮದಲ್ಲಿರುವ ದತ್ತಾತ್ರೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಅವಧೂತ ವಿನಯ್ ಗುರೂಜಿ ಅವರ ಆಶೀರ್ವಾದ ಪಡೆದರು.
ಗೌರಿಗದ್ದೆ ಆಶ್ರಮದಲ್ಲಿರುವ ದತ್ತಾತ್ರೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಅವಧೂತ ವಿನಯ್ ಗುರೂಜಿ ಅವರ ಆಶೀರ್ವಾದ ಪಡೆದಿದರು. ಈ ಹಿಂದೆ ಬಹುತೇಕ ರಾಜಕೀಯ ನಾಯಕರು ಈ ಆಶ್ರಮಕ್ಕೆ ಭೇಟಿ ನೀಡಿ ಅವಧೂತರ ಆಶೀರ್ವಾದ ಪಡೆದಿದ್ದಾರೆ.
ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ, ಸಿಎಂ ಕುಮಾರಸ್ವಾಮಿ, ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ, ಸ್ಪೀಕರ್ ರಮೇಶ್ ಕುಮಾರ್ ಸೇರಿದಂತೆ ಹಲವಾರು ರಾಜಕೀಯ ಮುಖಂಡರು ಆಶ್ರಮಕ್ಕೆ ಭೇಟಿ ನೀಡಿ ವಿನಯ್ ಗುರೂಜಿ ಅವರ ಆಶೀರ್ವಾದ ಪಡೆದಿದ್ದರು. ಇಂದು ಪ್ರಮೋದ್ ಮಧ್ವರಾಜ್ ಆಶ್ರಮಕ್ಕೆ ಭೇಟಿ ನೀಡಿರೋದು ಹಲವಾರು ಕುತೂಹಲಗಳಿಗೆ ಕಾರಣವಾಗಿದೆ. ಶೃಂಗೇರಿ ಶಾಸಕ ಟಿ ಡಿ ರಾಜೇಗೌಡ ಸೇರಿದಂತೆ ಹಲವಾರು ಮುಖಂಡರು ಮಧ್ವರಾಜ್ಗೆ ಸಾಥ್ ನೀಡಿದರು.