ಕರ್ನಾಟಕ

karnataka

ETV Bharat / state

ನಾಳೆ ಶೃಂಗೇರಿ ಶಾರದಾ ಪೀಠಕ್ಕೆ ರಾಷ್ಟ್ರಪತಿ ಭೇಟಿ: ಹೆಲಿಪ್ಯಾಡ್​​ಗೆ ಸಿದ್ಧತೆ

ಅಕ್ಟೋಬರ್ 8ರಂದು(ನಾಳೆ) ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶೃಂಗೇರಿಗೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆ ಶಾರದಾ ಪೀಠಕ್ಕೆ ಭೇಟಿ ನೀಡುವ ಭಕ್ತರಿಗೆ ನಿರ್ಬಂಧ ಹೇರಲಾಗಿದೆ. ಜತೆಗೆ ರಾಷ್ಟ್ರಪತಿಗಳ ಭದ್ರತಾ ಪಡೆಯ ಸಿಬ್ಬಂದಿ ಹೆಲಿಕಾಪ್ಟರ್ ಪ್ರಾಯೋಗಿಕ ಹಾರಾಟ ನಡೆಸುತ್ತಿದ್ದಾರೆ.

Chikkamagalore
ಶೃಂಗೇರಿ ಶಾರದಾ ಪೀಠಕ್ಕೆ, ರಾಷ್ಟ್ರಪತಿ ಆಗಮನ: ಹೆಲಿಪ್ಯಾಡ್​​ಗೆ ಸಿದ್ಧತೆ

By

Published : Oct 7, 2021, 12:39 PM IST

ಚಿಕ್ಕಮಗಳೂರು: ನಾಳೆ ರಾಷ್ಟ್ರಪತಿ ರಾಮನಾಥ್ ಕೋವಿಂದ್​​ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾ ಪೀಠಕ್ಕೆ ಭೇಟಿ ನೀಡುತ್ತಿದ್ದಾರೆ. ಈ ಹಿನ್ನೆಲೆ ವ್ಯಾಪಕ ಬಂದೋಬಸ್ತ್ ಮಾಡಲಾಗಿದೆ.

ಶೃಂಗೇರಿ ಶಾರದಾ ಪೀಠಕ್ಕೆ, ರಾಷ್ಟ್ರಪತಿ ಆಗಮನ: ಹೆಲಿಪ್ಯಾಡ್​​ಗೆ ಸಿದ್ಧತೆ

ನಾಳೆ ಬೆಳಗ್ಗೆ 11 ರಿಂದ 4 ವರೆಗೆ ರಾಷ್ಟ್ರಪತಿ ಕಾರ್ಯಕ್ರಮ ಇರುವ ಕಾರಣ ಹಾಗೂ ಶಾರದಾಂಬೆ ದರ್ಶನ ಹಾಗೂ ಉಭಯ ಶ್ರೀಗಳನ್ನು ರಾಷ್ಟ್ರಪತಿಗಳು ಭೇಟಿ ಮಾಡಲಿದ್ದಾರೆ. ರಾಷ್ಟ್ರಪತಿ ಆಗಮನ ಹಿನ್ನೆಲೆ ಅ.8 ಹಾಗು 9ರಂದು ಶೃಂಗೇರಿ ಶಾರದಾ ಮಠಕ್ಕೆ ಬರುವ ಭಕ್ತಾದಿಗಳಿಗೆ ಹಲವು ನಿರ್ಬಂಧ ಹೇರಲಾಗಿದ್ದು, ಭಕ್ತರು ಸಹಕರಿಸುವಂತೆ ದೇವಸ್ಥಾನ ಸಮಿತಿ ಮನವಿ ಮಾಡಿದೆ.

ಹೆಲಿಪ್ಯಾಡ್ ನಿರ್ಮಾಣ:

ರಾಷ್ಟ್ರಪತಿ ಭೇಟಿ ಹಿನ್ನೆಲೆ ಶೃಂಗೇರಿ ನಗರದಲ್ಲಿ ಮೂರು ಹೆಲಿಪ್ಯಾಡ್ ನಿರ್ಮಾಣ ಮಾಡಿ, ಸಂಪೂರ್ಣ ತಪಾಸಣೆ ನಡೆಸಲಾಗುತ್ತಿದೆ. ಕಳೆದ ಹಲವು ದಿನಗಳಿಂದ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ಪೂರ್ವ ತಯಾರಿ ನಡೆಸುತ್ತಿವೆ.

ಶೃಂಗೇರಿಯ ಗಾಂಧಿ ಮೈದಾನದಲ್ಲಿ ತಾತ್ಕಾಲಿಕ ಹೆಲಿಪ್ಯಾಡ್ ನಿರ್ಮಾಣ ಮಾಡಲಾಗಿದ್ದು, ಎಡೆಬಿಡದೆ ಕಾಮಗಾರಿ ನಡೆಯುತ್ತಿದೆ. ಇದೇ ಕಾರಣದಿಂದ ಗಾಂಧಿ ಮೈದಾನದ ವ್ಯಾಪಾರಸ್ಥರು ಅಂಗಡಿ ಮುಂಗಟ್ಟುಗಳನ್ನು ಖಾಲಿ ಮಾಡಿದ್ದಾರೆ. ರಾಷ್ಟ್ರಪತಿ ಭೇಟಿ ಹಿನ್ನೆಲೆ ಸ್ವಯಂ ಪ್ರೇರಿತವಾಗಿ ತೆರವುಗೊಳಿಸಿರುವುದಾಗಿ ವ್ಯಾಪಾರಸ್ಥರು ಹೇಳಿದ್ದಾರೆ.

ರಾಷ್ಟ್ರಪತಿ ಭೇಟಿಯ ತಯಾರಿಯ ಪೂರ್ವಭಾವಿ ಸಭೆಯ ನಿರ್ಧಾರದಂತೆ ಹೆಲಿಪ್ಯಾಡ್ ನಿರ್ಮಾಣ ದೃಷ್ಟಿಯಿಂದ ಗಾಂಧಿ ಮೈದಾನದಲ್ಲಿ ಇರುವ ಮರಗಳನ್ನು ಕಡಿಯಲು ಅನುಮತಿ ನೀಡಲಾಗಿದ್ದು, ಕಟಾವು ಕಾರ್ಯ ನಡೆಯುತ್ತಿದೆ.

ನಿರಂತರ ಮಳೆ :

ಶೃಂಗೇರಿ ಹೊರವಲಯದ ಬಳಿ ಹೆಲಿಪ್ಯಾಡ್ ಇದ್ದು, ಅಲ್ಲಿಯೂ ಹೆಲಿಕಾಪ್ಟರ್​​ಗಳನ್ನು ಇಳಿಸುವ ಸಾಧ್ಯತೆ ಇದೆ. ಅಲ್ಲದೆ ಕಳೆದ ಮೂರ್ನಾಲ್ಕು ದಿನಗಳಿಂದ ಈ ಭಾಗದಲ್ಲಿ ನಿರಂತರ ಮಳೆ ಸುರಿಯುತ್ತಿರುವ ಕಾರಣ, ಯಾವ ಭಾಗದಲ್ಲಿ ಅನುಕೂಲ ಆಗಲಿದೆಯೋ ಆ ಭಾಗದಲ್ಲಿಯೇ ಹೆಲಿಕಾಪ್ಟರ್ ಇಳಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

ABOUT THE AUTHOR

...view details