ಚಿಕ್ಕಮಗಳೂರು: ಶೃಂಗೇರಿಯ ಶಾರದಾ ಪೀಠಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆಗಮಿಸಿದ್ದು, ಶಾರದಾಂಬೆಯ ದರ್ಶನ ಪಡೆದರು. ಈ ಹಿನ್ನೆಲೆಯಲ್ಲಿ ಪೊಲೀಸರ್ ಹೈ ಅಲರ್ಟ್ ಆಗಿದ್ದು, ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಎನ್‌ಎಸ್‌ಜಿ ತಂಡದೊಂದಿಗೆ 800 ರಿಂದ 1,000 ಪೊಲೀಸರ ನಿಯೋಜನೆ ಮಾಡಲಾಗಿದೆ.
ಶೃಂಗೇರಿ ಶಾರದಾ ಪೀಠಕ್ಕೆ ರಾಷ್ಟ್ರಪತಿಗಳ ಭೇಟಿ; ಶಾರದಾಂಬೆಗೆ ನವರಾತ್ರಿ ವಿಶೇಷ ಪೂಜೆ ರಾಜ್ಯ ಹಾಗೂ ಕೇಂದ್ರ ಗುಪ್ತಚರ ಪೊಲೀಸರು ಎರಡು ದಿನದಿಂದ ಶೃಂಗೇರಿಯಲ್ಲಿ ಬೀಡುಬಿಟ್ಟು ಬಂದೋಬಸ್ತ್ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.
ಪಟ್ಟಣದಲ್ಲಿ ಅಂಗಡಿ-ಮುಂಗಟ್ಟುಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ರಾಷ್ಟ್ರಪತಿ ಸಂಚರಿಸುವ ಮಾರ್ಗದಲ್ಲಿ 30 ಅಡಿಗೊಬ್ಬ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಿದ್ದು, ಪಟ್ಟಣದ ಮೆಣಸೆ ಹಾಗೂ ಗಾಂಧಿ ಮೈದಾನದಲ್ಲಿ ಎರಡು ಹೆಲಿಪ್ಯಾಡ್ ನಿರ್ಮಾಣ ಮಾಡಲಾಗಿದೆ.
ಕುಟುಂಬಸಮೇತರಾಗಿ ಶೃಂಗೇರಿಗೆ ಬಂದಿರುವ ಕೋವಿಂದ್, ನವರಾತ್ರಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಇದ್ದರು.
ಶೃಂಗೇರಿ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ರಾಷ್ಟ್ರಪತಿ ಕುಟುಂಬ ಇದಕ್ಕೂ ಮುನ್ನ ಶಾರದಾಂಬಾ ದೇವಾಲಯಕ್ಕೆ ರಾಷ್ಟ್ರಪತಿಗಳು ಆಗಮಿಸುತ್ತಿದ್ದಂತೆ ಶ್ರೀಮಠದ ವತಿಯಿಂದ ಪೂರ್ಣಕುಂಭ ಸ್ವಾಗತ ಕೋರಲಾಗಿತ್ತು. ಮಧ್ಯಾಹ್ನ 3.30ರ ನಂತರ ರಾಷ್ಟ್ರಪತಿಗಳು ದೆಹಲಿಗೆ ವಾಪಸ್ ಆಗಲಿದ್ದಾರೆ.